ವಸತಿ ಶಾಲೆ ಪ್ರವೇಶಕ್ಕೆ ಜೂ.10 ರಂದು ಕೌನ್ಸೆಲಿಂಗ್

Get real time updates directly on you device, subscribe now.

 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಈಗಾಗಲೇ ಪ್ರವೇಶ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹ ವಿದ್ಯಾರ್ಥಿಗಳನ್ನು  ಆಯ್ಕೆಮಾಡಿ ಸೀಟು ಹಂಚಿಕೆ ಮಾಡಲು ಜೂನ್ 10 ರಂದು 1ನೇ ಸುತ್ತಿನ ಕೌನ್ಸಲಿಂಗ್ ನಡೆಸಲಾಗುವುದು.

ತಳಕಲ್‌ನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜೂನ್ 10 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಹಾಗೂ ಮಧ್ಯಾಹ್ನ 03 ಗಂಟೆಯಿAದ 05 ಗಂಟೆಯವರೆಗೆ ಇತರೆ ಸಮುದಾಯದ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ನಡೆಯಲಿದೆ.
ಕೌನ್ಸೆಲಿಂಗ್‌ಗೆ ಅರ್ಹತೆ ಹೊಂದಿದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಕೊಪ್ಪಳ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಆಯ್ಕೆಯಾದ  ವಿದ್ಯಾರ್ಥಿಗಳು ತಪ್ಪದೇ ಕೌನ್ಸೆಲಿಂಗ್‌ಗೆ ಹಾಜರಾಗಬೇಕು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್ ಸ್ಥಳದಲ್ಲಿಯೇ ಸಂಬAಧಪಟ್ಟ ಶಾಲೆಗಳ ಪ್ರವೇಶ ದಾಖಲಾತಿ ಮಾಡಿಕೊಳ್ಳಲಾಗುವುದು ಆದ್ದರಿಂದ ವಿದ್ಯಾರ್ಥಿಗಳು ಕೌನ್ಸೆಲಿಂಗ್‌ಗೆ ಬರುವಾಗ ಪ್ರವೇಶ ಪರೀಕ್ಷಾ ಗುರುತಿನ ಚೀಟಿ(ಹಾಲ್‌ಟಿಕೆಟ್), ಮೂಲ ವರ್ಗಾವಣೆ ಪ್ರಮಾಣ ಪತ್ರ.(ಟಿ.ಸಿ.), ಮೂಲ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣ ಪತ್ರ, ವಿಶೇಷ ಮಕ್ಕಳ ಪ್ರಮಾಣ ಪತ್ರ (ಮಾಜಿ ಸೈನಿಕರು, ಸಫಾಯಿ ಕರ್ಮಚಾರಿ, ದೇವದಾಸಿ, ಅನಾಥ, ರೈತರ ಆತ್ಮಹತ್ಯೆ ಇತರೆ), 5ನೇ ತರಗತಿಯ ಮೂಲ ಅಂಕಪಟ್ಟಿ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ 4 ಭಾವಚಿತ್ರಗಳನ್ನು ಕಡ್ಡಾಯವಾಗಿ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಟಣಕನಕಲ್, ತಳಕಲ್, ಕುಕನೂರು, ಕುದರಿಮೋತಿ, ಹಿರೇಬೆಣಕಲ್-1&2 ಮತ್ತು ತಾಲ್ಲೂಕು ಮಾಹಿತಿ ಕೇಂದ್ರ ಕೊಪ್ಪಳ,ಕುಷ್ಟಗಿ ಗಂಗಾವತಿ ಮತ್ತು ಯಲಬುರ್ಗಾ ಹಾಗೂ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ ಹೊಸಪೇಟೆ ರಸ್ತೆ ಕೊಪ್ಪಳ-583231 ದೂರವಾಣಿ ಸಂಖ್ಯೆ:-08539-225070 ಈ ವಿಳಾಸಕ್ಕೆ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು  ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!