ಜಿಲ್ಲಾಡಳಿತ ಭವನ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ

Get real time updates directly on you device, subscribe now.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೋಲಿಸ್ ಇಲಾಖೆ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ನಗಾರಭಿವೃದ್ಧಿ ಕೋಶ, ನಗರ ಸಭೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರದಂದು ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಹಾಗೂ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಶೇಖರ.ಸಿ ಅವರು ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಯಶೋಧ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಲಕಾರಿ ರಾಮಪ್ಪ ಒಡೆಯರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ. ಕಣವಿ, ಪ್ರಧಾನ ಸಿವಿಲ್ ನ್ಯಾಯಾಧೀಶರು ಜೆ ಎಂ ಎಫ್ ಸಿಗಳಾದ ಭಾಗ್ಯಲಕ್ಷ್ಮಿ ಸೇರಿದಂತೆ ನ್ಯಾಯಾಧೀಶರು, ವಕೀಲರು, ಅರಣ್ಯ ಹಾಗೂ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!