ಕುಕನೂರು ವಸತಿ ಶಾಲೆ : ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

Get real time updates directly on you device, subscribe now.

): ಕುಕನೂರಿನ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲಮಾಧ್ಯಮ ಉನ್ನತೀಕರಿಸಿದ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅತಿಥಿ (ಗೌರವ) ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಸತಿ ಶಾಲೆಯು 6 ನೇ ತರಗತಿಯಿಂದ 12ನೇ ತರಗತಿಯವರೆಗೆ ಕಾರ್ಯನಿರ್ವಹಿಸುತ್ತಿದ್ದು, ಶಾಲಾ ವಿಭಾಗದಲ್ಲಿ ಖಾಲಿ ಇರುವ ಸಮಾಜ ವಿಜ್ಞಾನ ವಿಷಯ ಶಿಕ್ಷಕರ ಹುದ್ದೆಗೆ ಬಿ.ಎ.ಬಿ.ಎಡ್ ಹಾಗೂ ಗಣಿತ ವಿಷಯ ಶಿಕ್ಷಕರ ಹುದ್ದೆಗೆ ಬಿ.ಎಸ್‌ಸಿ. ಬಿ.ಎಡ್ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕಾಲೇಜು ವಿಭಾಗದಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ಅರ್ಥಶಾಸ್ತç ವಿಷಯ ಬೋಧಕರ ಹುದ್ದೆಗೆ ಎಂ.ಎ. ಬಿ.ಎಡ್., ಭೌತಶಾಸ್ತç, ರಸಾಯನಶಾಸ್ತç, ಗಣಿತ, ಜೀವಶಾಸ್ತç ಬೋಧಕರ ಹುದ್ದೆಗೆ ಎಂ.ಎಸ್‌ಸಿ.ಬಿ.ಎಡ್ ವಿದ್ಯಾರ್ಹತೆ, ಕಂಪ್ಯೂಟರ್ ಸೈನ್ಸ್ ವಿಷಯಕ್ಕೆ ಎಂ.ಎಸ್‌ಸಿ.ಬಿ.ಎಡ್(ಕAಪ್ಯೂಟರ್ ಸೈನ್ಸ್)/ಎಂ.ಸಿ.ಎ ವಿದ್ಯಾರ್ಹತೆ ಹಾಗೂ ವ್ಯವಹಾರ ಅಧ್ಯಯನ ಮತ್ತು ಲೆಕ್ಕಶಾಸ್ತç ವಿಷಯ ಬೋಧಕರ ಹುದ್ದೆಗೆ ಎಂಕಾA.ಬಿ.ಎಡ್ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿದ್ದು, ಅಂದು ಸಂಜೆ 4.30 ಗಂಟೆಯೊಳಗೆ ಅರ್ಜಿಯನ್ನು ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ಉನ್ನತೀಕರಿಸಿದ ವಸತಿ ಶಾಲೆ, ಕುಕನೂರು ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲೆಯ ಪ್ರಾಂಶುಪಾಲರ ದೂ.ಸಂ : 8050038138, 9844040035 ಗೆ ಸಂಪರ್ಕಿಸಬಹುದು ಎಂದು ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: