ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ
2024-25ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಸಮನ್ವಯ ಶಿಕ್ಷಣ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಬ್ಲಾಕ್‌ಗಳಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಸಂಪನ್ಮೂಲ ಶಿಕ್ಷಕರ (ಬಿ.ಐ.ಇ.ಆರ್.ಟಿ) ಹುದ್ದೆಗಳಿಗೆ ಅರ್ಹ ಶಿಕ್ಷಕರನ್ನು ನೇಮಿಸಿಕೊಳ್ಳಲು ಆರ್.ಸಿ.ಐ ನಿಯಮಾವಳಿ ಪ್ರಕಾರ ಸಮನ್ವಯ ಶಿಕ್ಷಣ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯಥಿಗಳಿಂದ ನೇರ ಗುತ್ತಿಗೆಯಡಿ ತಾತ್ಕಾಲಿಕವಾಗಿ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳು ತಾತ್ಕಾಲಿಕವಾಗಿದ್ದು, ದಿನಾಂಕ : 31-03-2025 ರವರೆಗೆ ಅಥವಾ ಮುಂದಿನ ಆದೇಶದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಇರುತ್ತದೆ. ನೇರ ಗುತ್ತಿಗೆಯಡಿ ತಾತ್ಕಾಲಿಕವಾಗಿ ಸೇವೆ ಪಡೆದ ವಿಶೇಷ ಶಿಕ್ಷಕರು/ಬಿ.ಐ.ಇ.ಆರ್.ಟಿ ಹುದ್ದೆಗಳು ಸರ್ಕಾರಿ ಶಾಲಾ ವಿಶೇಷ ಶಿಕ್ಷಕರಿಂದ ಭರ್ತಿಯಾದಲ್ಲಿ ನೇರ ಗುತ್ತಿಗೆಯ ಬಿ.ಐ.ಇ.ಆರ್.ಟಿ ಗಳನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲಾಗುವುದು.
ಆಸಕ್ತರು ಜೂನ್ 10 ರ ಸಂಜೆ 05.30 ಗಂಟೆಯೊಳಗೆ ಅಗತ್ಯ ದಾಖಲೆಗಳೊಂದಿಗೆ ಉಪನಿರ್ದೇಶಕರು ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಖಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ, ಕೊಪ್ಪಳ ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹುದ್ದೆಗೆ ಸಂಬAಧಿಸಿದ ವಿದ್ಯಾರ್ಹತೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಸಮಗ್ರ ಶಿಕ್ಷಣ ಕರ್ನಾಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯ ದೂ.ಸಂ. 9480695414 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.