ಜೂ.16 ರಂದು ಗಂಗಾ ಯಮುನಾ ಸೌಹಾರ್ದ ಸಹಕಾರಿ ಸಂಘ ನಿ, ನೂತನ ಕಟ್ಟಡ ಉದ್ಢಾಟನೆ

Get real time updates directly on you device, subscribe now.

ಕೊಪ್ಪಳ. : ನಗರದ ಬಸ್ ಸ್ಟ್ಯಾಂಡ್ ಎದುರುಗಡೆ, ಟಿಕೋಟೆಕರ್‌ ಪೆಟ್ರೋಲ್‌ ಬಂಕ್ ಹಿಂಭಾಗದಲ್ಲಿ ನೂತನವಾಗಿ ನಿರ್ಮಿಸಿದ ಗಂಗಾ ಯಮುನಾ ಸೌಹಾರ್ದ
ಸಹಕಾರಿ ಸಂಘ ನಿ, ನೂತನ ಕಟ್ಟಡವನ್ನು ಜೂ.16. ರವಿವಾರ ಬೆಳಿಗ್ಗೆ 10-00 ಗಂಟೆಗೆ ಲಕ್ಷ್ಮೀ-ವ-ಗಣಪತಿ ಪೂಜೆಯೊಂದಿಗೆ ಪ್ರಾರಂಭಿಸಲಾಗುತ್ತದೆ ಎಂದು ಗಂಗಾ ಯಮುನಾ ಸೌಹಾರ್ದ ಸಹಕಾರಿ ಸಂಘ ನಿ, ಅಧ್ಯಕ್ಷ ಗವಿಸಿದ್ದಯ್ಯ ಲಿಂಗಬಸಯ್ಯನಮಠ ತಿಳಿಸಿದ್ದಾರೆ.
ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಕುಕನೂರಿನ ಅನ್ನದಾನೇಶ್ವರ ಶಾಖಾಮಠದ ಮಹಾದೇವ ಮಹಾಸ್ವಾಮಿಗಳು,
ಮುಂಡರಗಿ, ಮೈನಳ್ಳಿ- ಬಿಕನಳ್ಳಿಯ ಸಿದ್ಧಲಿಂಗೇಶ್ವರ ಮಹಾಸ್ವಾಮಿಗಳು ದಿವ್ಯಸಾನಿಧ್ಯವಹಿಸುವರು. ಸಹಕಾರ ಸಚಿವ ಕೆ.ಎನ್‌. ರಾಜಣ್ಣ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವ ಶಿವರಾಜ ತಂಗಡಗಿ, ಜಿಲ್ಲಾಧಿಕಾರಿ ನಲಿನ ಅತುಲ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ, ಅಧ್ಯಕ್ಷ ಜಿ. ನಂಜನಗೌಡ ಕಾರ್ಯಕ್ರಮವನ್ನು ಉದ್ಘಾಟಿಸುವರು. ಹಾಸ್ಯ ಭಾಷಣಕಾರರು ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಂಗಾವತಿ ಪ್ರಾಣೇಶ ವಿಶೇಷ ಅಹ್ವಾನಿತರಾಗಿ ಆಗಮಿಸುವರು. ಗಂಗಾ ಯಮುನಾ ಸೌಹಾರ್ದ ಸಹಕಾರಿ ಸಂಘ ನಿ, ಅಧ್ಯಕ್ಷ ಹಾಗೂ ಜಿಲ್ಲಾ ನಿರ್ದೇಶಕ ಗವಿಸಿದ್ದಯ್ಯ ಎಸ್. ಲಿಂಗಬಸಯ್ಯನಮಠ ಕಾರ್ಯಕ್ರಮದ ಅಧ್ಯಕ್ಷತೆವಹಿಸುತ್ತಾರೆ.
ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ, ಶಾಸಕ ಬಸವರಾಜ ರಾಯರೆಡ್ಡಿ, ಸಂಸದ ಕೆ. ರಾಜಶೇಖರ ಹಿಟ್ನಾಳ, ಮಾಜಿ ಸಚಿವ ಹಾಲಪ್ಪ ಬಸಪ್ಪ ಆಚಾರ್, ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಅಮರೇಗೌಡ ಬಯ್ಯಾಪೂರ,
ಮಾಜಿ ಶಾಸಕ ಬಸವರಾಜ ದಡೇಸುಗೂರ,  ರಾಷ್ಟ್ರೀಯ ಸಂರಕ್ಷರು, ಸಹಕಾರ ಭಾರತಿ ರಮೇಶ ವೈದ್ಯ, ಬಿ.ಜೆ.ಪಿ. ರಾಜ್ಯ ಕಾರ್ಯಕಾರಣಿ ಸದಸ್ಯಡಾ|| ಬಸವರಾಜ ಕೆ ಶರಣಪ್ಪ, ಕ.ರಾ.ಸೌ.ಸಂ.ಸ.ನಿ ಉಪಾಧ್ಯಕ್ಷ ಎ.ಆರ್. ಪ್ರಸನ್ನಕುಮಾರ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ,
ಆರ್.ಕೆ.ಡಿ.ಸಿ.ಸಿ. ಬ್ಯಾಂಕ್‌, ರಾಯಚೂರ-ಕೊಪ್ಪಳ ಅಧ್ಯಕ್ಷ ವಿಶ್ವನಾಥ ಪಾಟೀಲ, ಸಹಕಾರ ಸಂಘಗಳ ಉಪನಿಬಂಧಕ ದಸ್ತಗೀರಿ ಅಲಿ ಸೇರಿದಂತೆ ಇನ್ನಿತರರು ಭಾಗವಹಿಸುತ್ತಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!