ಮೋದಿ, ಎಚ್‌ಡಿಕೆ ಪದಗ್ರಹಣಕ್ಕೆ ದೆಹಲಿಗೆ ತೆರಳಿದ ಸಿವಿಸಿ

Get real time updates directly on you device, subscribe now.

ಬೆಂಗಳೂರು :   ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಹಾಗೂ ಜೆಡಿಎಸ್ ನಾಯಕರು ಮಾಜಿ ಸಿಎಂ  ಎಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಗಳಾಗಿ ಪದಗ್ರಹಣ ಮಾಡುತ್ತಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ  ಚಂದ್ರಶೇಖರ್ ಅವರು ದೆಹಲಿಗೆ ತೆರಳಿದ್ದಾರೆ. ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಬಂದ ವಿಶೇಷ ಸಂದೇಶವನ್ನು ಪರಿಗಣಿಸಿ ಅವರು ಶನಿವಾರ ರಾಜಧಾನಿಗೆ ತೆರಳಿದರು. ಶನಿವಾರ ರಾತ್ರಿ ರಾಜ್ಯದಿಂದ ನೂತನವಾಗಿ ಆಯ್ಕೆಯಾದ ಸಂಸದರಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ್, ಹೆಚ್ ಡಿ ಕುಮಾರಸ್ವಾಮಿ ಹಾಗೂ ಇತರೆ ನಾಯಕರನ್ನು ಭೇಟಿಯಾಗಿ ಅಭಿನಂದನೆಗಳನ್ನು ತಿಳಿಸಿದರು. ಕೊಪ್ಪಳದಲ್ಲಿ ಜೆಡಿ‌ (ಎಸ್) ಬಿಜೆಪಿ ಮೈತ್ರಿ ಯಶಸ್ವಿಯಾಗಿದ್ದು ಮುಂದಿನ ದಿನಗಳಲ್ಲಿ ಎರಡೂ ಪಕ್ಷಗಳಿಗೆ ಉತ್ತಮ ಭವಿಷ್ಯವಿದೆ ಎಂಬುದನ್ನು ಮನದಟ್ಟು ಮಾಡಿಕೊಟ್ಟರು. ಇದೇ ಸಂದರ್ಭದಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ಕುರಿತು ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿದರು.

Get real time updates directly on you device, subscribe now.

Comments are closed.

error: Content is protected !!