ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಹೋರಾಟಕ್ಕೆ ಕೊಪ್ಪಳ ಜಿಲ್ಲೆ ಬೆಂಬಲಿಸಲು ಮನವಿ : ಡಾ.ಕಳಸ

Get real time updates directly on you device, subscribe now.


ಕೊಪ್ಪಳ :ರಾಯಚೂರಿನಲ್ಲಿಯೇ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಏಮ್ಸ್ ಅನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಕಳೆದ 759 ದಿನಗಳಿಂದ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ರಾಯಚೂರಿನಲ್ಲಿ ನಡೆಯುತ್ತಿದೆ ಈ ಹೋರಾಟಕ್ಕೆ ಕೊಪ್ಪಳ ಜಿಲ್ಲೆ ಬೆಂಬಲಿಸುವಂತೆ ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಡಾ.ಬಸವರಾಜ ಕಳಸ ಮನವಿ ಮಾಡಿದರು.
ಅವರು ರವಿವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿದ್ದೇಶಿಸಿ ಮಾತನಾಡಿ ಈ ಹಿಂದೆ ಡಾ .ಡಿ .ಎಂ ನಂಜುಂಡಪ್ಪ ವರದಿಯ ಶಿಫಾರಸ್ಸಿನಂತೆ ಪ್ರಾದೇಶಿಕ ಅಸಮತೋಲನೆ ನಿವಾರಣೆಗಾಗಿ ರಾಯಚೂರಿನಲ್ಲಿ ಐಐಟಿ ಭಾರತೀಯ ತಂತ್ರಜ್ಞಾನ ಸಂಸ್ಥೆ ಸ್ಥಾಪನೆ ಆಗಬೇಕಾಗಿತ್ತು, ಆದರೆ ನಮ್ಮ ಸುದೀರ್ಘ ಹೋರಾಟದ ಹೊರತಾಗಿಯೂ ಕೇಂದ್ರ ಸರ್ಕಾರದಲ್ಲಿ ಪ್ರಭಾವಿ ರಾಜಕಾರಣಿಗಳ ಕುತಂತ್ರದಿಂದ ಅದು ಧಾರವಾಡದಲ್ಲಿ ಸ್ಥಾಪನೆಯಾಯಿತು. ಇದು ನಮ್ಮ ಕಲ್ಯಾಣ ಕರ್ನಾಟಕಕ್ಕೆ ಮಾಡಿದ ಮಹಾ ದ್ರೋಹ. ಕೇಂದ್ರ ಸರ್ಕಾರವೇ ಸಂವಿಧಾನಕ್ಕೆ ತಿದ್ದುಪಡಿ ತಂದು 371 ಜೆ .ಅನ್ವಯ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದೆ. ಆದರೆ ವಿಶೇಷವಾದ ಯಾವೊಂದು ಯೋಜನೆಗಳು ಇದುವರೆಗೂ ಜಾರಿಯಾಗಲಿಲ್ಲ .ಈಗಲಾದರೂ ರಾಯಚೂರಿನಲ್ಲಿ ಕೇಂದ್ರ ಸರಕಾರ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಸ್ಥಾಪನೆ ಮಾಡಲೇಬೇಕು . ಕೇಂದ್ರ ಸರ್ಕಾರವೇ ಘೋಷಿಸಿದಂತೆ ರಾಯಚೂರು ಜಿಲ್ಲೆಯನ್ನು ಮಹತ್ವಕಾಂಕ್ಷಿ ಜಿಲ್ಲೆ ಎಂದು ಘೋಷಣೆ ಮಾಡಿದೆ ಆದರೆ ಯಾವುದೇ ಮಹತ್ವಕಾಂಕ್ಷೆ ಯೋಜನೆಗಳು ಜಾರಿ ಆಗಿರುವುದಿಲ್ಲ. ಅದಕ್ಕಾಗಿ ಆದರೂ ರಾಯಚೂರಿನಲ್ಲಿ ಏಮ್ಸ್ ಸಂಸ್ಥೆಯನ್ನು ಕೇಂದ್ರ ಸರ್ಕಾರ ಸ್ಥಾಪನೆ ಮಾಡಬೇಕು . ನಮ್ಮ ಹೋರಾಟಕ್ಕೆ ಇಡೀ ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳು ಬೆಂಬಲಿಸಬೇಕು ಎನ್ನುವ ಉದ್ದೇಶದಿಂದ ಕೊಪ್ಪಳ ಜಿಲ್ಲೆಯ ಪ್ರಗತಿಪರ ದಲಿತ ಪರ ಕನ್ನಡಪರ ಮತ್ತು ಇತರೆ ಸಂಘಟನೆಗಳ ಬೆಂಬಲಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಏಮ್ಸ್ ಹೋರಾಟ ಸಮಿತಿಯ ಶಿವರಾಜ್ ಉಳ್ಳಾಗಡ್ಡಿ,ಜಗದೀಶ್ ,ರಮೇಶ್ ತುಪ್ಪದ್ ಮತ್ತಿತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!