ಜೂನ್ 12 ರಂದು ಕಾನೂನು ಅರಿವು ನೆರವು ಕಾರ್ಯಕ್ರಮ
: ಕಾರ್ಮಿಕ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ತಾಲೂಕ ಆಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಸಂಜೆ 04 ಗಂಟೆಗೆ ಬಹದ್ದೂರಬಂಡಿ ರಸ್ತೆಯ ಸರಸ್ವತಿ ವಿದ್ಯಾ ಮಂದಿರದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮುಖ್ಯ ಅತಿಥಿಗಳಾಗಿ ತಹಶೀಲ್ದಾರ ವಿಠ್ಠಲ್ ಚೌಗಲಾ, ಕೊಪ್ಪಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳಾದ ದುಂಡಪ್ಪ ತುರಾದಿ, ನಗರಸಭೆ ಆಯುಕ್ತರಾದ ಗಣಪತಿ ಪಾಟೀಲ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ.ಕಣವಿ, ಜಿಲ್ಲಾ ಸರ್ಕಾರಿ ವಕೀಲರಾದ ಆಸೀಫ್ ಸರದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಶಂಕ್ರಯ್ಯ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಯಶ್ರೀ ಆರ್., ಸರಸ್ವತಿ ವಿದ್ಯಾಮಂದಿರದ ಮುಖ್ಯೋಪಾಧ್ಯಾಯರಾದ ರೇಣುಕಾ ಎಚ್.ಅತ್ತನೂರ್ ಆಗಮಿಸುವರು ಎಂದು ಕೊಪ್ಪಳ ವೃತ್ತ ಕಾರ್ಮಿಕ ನಿರೀಕ್ಷಕರಾದ ಶಿವಶಂಕರ್ ತಳವಾರ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.