ರೈತರಿಗೆ ಬಿತ್ತನೆ ಬೀಜಗಳು, ರಸಗೊಬ್ಬರದ ಕೊರತೆಯಾಗದಿರಲಿ: ನಲಿನ್ ಅತುಲ್

Get real time updates directly on you device, subscribe now.

   ಈಗಾಗಲೇ ಮುಂಗಾರು ಮಳೆಗಳು ಆರಂಭವಾಗಿದ್ದು, ಹೀಗಾಗಿ ಬಿತ್ತನೆ ಮಾಡಲು ಜಿಲ್ಲೆಯಲ್ಲಿ ರೈತರ ಅವಶ್ಯಕತೆಗೆ ತಕ್ಕಂತೆ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರದ ದಾಸ್ತಾನು ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸಿ, ಜಿಲ್ಲೆಯ ರೈತರಿಗೆ ಬಿತ್ತನೆ ಸಂದರ್ಭ ತೊಂದರೆ ಆಗಬಾರದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.

ಮುಂಗಾರು 2024ಕ್ಕೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಬಗ್ಗೆ ಸೋಮವಾರ (ಜೂನ್ 10) ದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ರೈತರಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಪೂರೈಸುವುದರ ಜೊತೆಗೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಹಾಗೂ ಮಾರಾಟವಾಗದಂತೆ ಎಚ್ಚರ ವಹಿಸಬೇಕು. ಅಂತಹ ಪ್ರಕರಣಗಳು ಕಂಡುಬAದಲ್ಲಿ ಕೂಡಲೇ ಪ್ರಕರಣ ದಾಖಲಿಸಿ ಅಗತ್ಯ ಕ್ರಮಕೈಗೊಳ್ಳಬೇಕು. ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮಾರಾಟಗಾರರು ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ರೈತರಿಗೆ ಮಾರಾಟ ಮಾಡಬೇಕು. ಈ ಕುರಿತು ನಿಗದಿತ ದರಪಟ್ಟಿಯನ್ನು ಪ್ರತಿ ಮಾರಾಟ ಮಳಿಗೆಯಲ್ಲಿ ಪ್ರದರ್ಶಿಸಬೇಕು. ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಸಂಬAಧಿಸಿದ ಎಲ್ಲ ಇಲಾಖೆಗಳು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಮಳೆಗಾಲ ಹಿನ್ನೆಲೆಯಲ್ಲಿ ಕಂದಾಯ, ಕೃಷಿ, ತೋಟಗಾರಿಕಾ ಮತ್ತು ಇನ್ನಿತರ ಇಲಾಖೆಗಳ ಅಧಿಕಾರಿಗಳೊಂದಿಗೆ ಗ್ರಾಮಮಟ್ಟದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸಮನ್ವಯ ವಹಿಸಿ ಕಾರ್ಯನಿರ್ವಹಿಸಬೇಕು. ಮಳೆಗಾಲ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ. ಅವರು ಮಾತನಾಡಿ,  ಜಿಲ್ಲೆಯಲ್ಲಿ ಜೂನ್ 01 ರಿಂದ ಜೂನ್ 09 ರವರೆಗೆ ವಿವಿಧ ತಾಲೂಕುಗಳಲ್ಲಿ ವಾಡಿಕೆ ಮಳೆಗಿಂತ ಶೇ. 120 ರಷ್ಟು ಹೆಚ್ಚಿನ ಮಳೆ ಸುರಿದಿದೆ. ಗಂಗಾವತಿ ತಾಲೂಕಿನಲ್ಲಿ ವಾಡಿಕೆ ಮಳೆ 28.5 ಮಿಮಿ ಇದ್ದು, ವಾಸ್ತವಿಕವಾಗಿ 83.2 ಮಿಮಿ ಸುರಿದಿದೆ. ಕೊಪ್ಪಳ ತಾಲೂಕಿನಲ್ಲಿ ವಾಡಿಕೆ ಮಳೆ 31.5 ಮಿಮಿ ಇದ್ದು, ವಾಸ್ತವಿಕವಾಗಿ 84.9 ಮಿಮಿ ಸುರಿದಿದೆ. ಕುಷ್ಟಗಿ ತಾಲೂಕಿನಲ್ಲಿ ವಾಡಿಕೆ ಮಳೆ 22.3 ಮಿಮಿ ಇದ್ದು, ವಾಸ್ತವಿಕವಾಗಿ 46.0 ಮಿಮಿ ಸುರಿದಿದೆ. ಯಲಬುರ್ಗಾ ತಾಲೂಕಿನಲ್ಲಿ ವಾಡಿಕೆ ಮಳೆ 26.0 ಮಿಮಿ ಇದ್ದು, ವಾಸ್ತವಿಕವಾಗಿ 53.0 ಮಿಮಿ ಸುರಿದಿದೆ. ಕಾರಟಗಿ ತಾಲೂಕಿನಲ್ಲಿ ವಾಡಿಕೆ ಮಳೆ 23.7 ಮಿಮಿ ಇದ್ದು ವಾಸ್ತವಿಕವಾಗಿ 43.8 ಮಿಮಿ ಮಳೆ ಸುರಿದಿದೆ. ಕುಕನೂರು ತಾಲೂಕಿನಲ್ಲಿ ವಾಡಿಕೆ ಮಳೆ 33.7 ಮಿಮೀ ಇದ್ದು, ವಾಸ್ತವಿಕಾವಾಗಿ 47.0 ಮಿಮಿ ಮಳೆ ಸುರಿದಿದೆ. ಕನಕಗಿರಿ ತಾಲ್ಲೂಕಿನಲ್ಲಿ ವಾಡಿಕೆ ಮಳೆ 25.1 ಮಿಮಿ ಇದ್ದು, ವಾಸ್ತವಿಕವಾಗಿ 62.1 ಮಿಮಿ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಒಟ್ಟಾರೆ ವಾಡಿಕೆ ಮಳೆ 28 ಮಿಮಿ ಇದ್ದು, ವಾಸ್ತವಿಕವಾಗಿ 61 ಮಿಮಿ ಮಳೆ ಸುರಿದಿದ್ದು, ಶೇ.120 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ತಿಳಿಸಿದರು.
ಬಿತ್ತನೆ ಬೀಜ ದಾಸ್ತಾನು : 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತ, ಮೆಕ್ಕೆಜೋಳ, ಸಜ್ಜೆ, ನವಣೆ, ಹೆಸರು, ತೊಗರಿ, ಸೂರ್ಯಕಾಂತಿ, ಅಲಸಂದಿ ಸೇರಿ ಬಿತ್ತನೆ ಬೀಜ ವಿತರಣೆಗೆ ಜೂನ್ 10 ರವರೆಗೆ 7,369.49 ಕ್ವಿಂಟಲ್‌ನಷ್ಟು ಬಿತ್ತನೆ ಬೀಜ ದಾಸ್ತಾನು ಸ್ವೀಕೃತಿಯಾಗಿದ್ದು, ಈ ಪೈಕಿ 4,707.38 ಕ್ವಿಂಟಲ್ ಬಿತ್ತನೆ ಬೀಜಗಳನ್ನು ವಿತರಿಸಲಾಗಿದೆ. ಸದ್ಯ 2,662.11 ಕ್ವಿಂಟಲ್ ನಷ್ಟು ಬಿತ್ತನೆ ಬೀಜ ದಾಸ್ತಾನು ಇರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ಮಾಹಿತಿ ನೀಡಿದರು.
ರಸಗೊಬ್ಬರ ದಾಸ್ತಾನು : 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜೂನ್ 10 ರವರೆಗೆ ಜಿಲ್ಲೆಯಲ್ಲಿ ಯೂರಿಯಾ 670 ಟನ್, ಡಿಎಪಿ 1,620 ಟನ್, ಎಂಓಪಿ 310 ಟನ್ ಹಾಗೂ ಕಾಂಪ್ಲೆಕ್ಸ್ 2,537 ಟನ್ ನಷ್ಟು ವಿವಿಧ ರಸಗೊಬ್ಬರ ಲಭ್ಯ ದಾಸ್ತಾನು ಇರುತ್ತದೆ. ಯೂರಿಯಾ, ಡಿಎಪಿ, ಎಂಒಪಿ, ಕಾಂಪ್ಲೆಕ್ಸ್ ಸೇರಿ ಒಟ್ಟು 5,137 ಟನ್‌ನಷ್ಟು ರಸಗೊಬ್ಬರ ಕಾಪು ದಾಸ್ತಾನು ಲಭ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಮೇವು ಲಭ್ಯತೆ: ಜಿಲ್ಲೆಯಲ್ಲಿ ಜೂನ್ 07 ರಂತೆ ಎಲ್ಲ ತಾಲ್ಲೂಕುಗಳಲ್ಲಿ 31 ವಾರಗಳಿಗೆ ಸಾಕಾಗುವಷ್ಟು ಒಟ್ಟು 4,68,283.84 ಟನ್ ಮೇವು ಲಭ್ಯವಿದೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಸೇರಿದಂತೆ ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: