ಹಿರಿಯ ಸರೋದ್ ವಾದಕರು, ಸಂಸ್ಕೃತಿ ಚಿಂತಕರು ಪ್ರೊ. ರಾಜೀವ್ ತಾರಾನಾಥ್ ಇನ್ನಿಲ್ಲ – ಸಿಎಂ ಸಿದ್ದರಾಮಯ್ಯ ಸಂತಾಪ
ಹಿರಿಯ ಸರೋದ್ ವಾದಕರು, ಸಂಸ್ಕೃತಿ ಚಿಂತಕರು ಪ್ರೊಫೆಸರ್ ರಾಜೀವ್ ತಾರಾನಾಥ್ ಇನ್ನಿಲ್ಲ…
ನಾಳೆ ಅವರ ಮೈಸೂರಿನ ಮನೆಯಲ್ಲಿ ಬೆಳಗ್ಗೆ 9:00 ರಿಂದ 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮನೆಯ ವಿಳಾಸ #853 ಪಂಚಮಂತ್ರ ರಸ್ತೆ ಕುವೆಂಪು ನಗರ ಮೈಸೂರು
ರಾಜೀವ್ ತಾರಾನಾಥ್ ರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಜಗತ್ಪ್ರಸಿದ್ದ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ ತಾರಾನಾಥ್ ಅವರ ನಿಧನದಿಂದ ದು:ಖಿತನಾಗಿದ್ದೇನೆ. ಕರ್ನಾಟಕದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ರಾಜೀವ್ ತಾರಾನಾಥರ ಅಗಲಿಕೆ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ಸಂಗೀತಲೋಕಕ್ಕೆ ತುಂಬಲಾರದ ನಷ್ಟ. ರಾಜೀವ್ ತಾರಾನಾಥ್ ಖ್ಯಾತ ಸಂಗೀತ ಕಲಾವಿದರು ಮಾತ್ರ ಆಗಿರಲಿಲ್ಲ, ಅದನ್ನು ಮೀರಿ ಶ್ರೇಷ್ಠ ಮಾನವತಾವಾದಿಯಾಗಿದ್ದರು. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ.
Comments are closed.