10ನೇ ಅಂತಾರಾಷ್ಟಿçÃಯ ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಎಡಿಸಿ ಸೂಚನೆ
ಆಯುಷ್ ಇಲಾಖೆಯಿಂದ ಜೂನ್ 21 ರಂದು ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸುವ 10ನೇ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು ಹಾಗೂ ಸಂಬAಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಂತಾರಾಷ್ಟಿçÃಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಬೆಳಿಗ್ಗೆ 6.30 ರಿಂದ 7.30ರವರೆಗೆ ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ನಗರದಲ್ಲಿನ ವಸತಿ ಶಾಲೆಗಳ 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳು ಹಾಗೂ 10 ನೇ ತರಗತಿ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳು ವಿದ್ಯಾರ್ಥಿಗಳು, ಕ್ರೀಡಾ ವಸತಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊAದಿಗೆ ಕಡ್ಡಾಯವಾಗಿ ಹಾಜರಾಗಬೇಕು. ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆ ಜೊತೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಬೆಳಿಗ್ಗೆ 06 ಗಂಟೆಗೆ ಎಲ್ಲರೂ ತಾಲ್ಲೂಕು ಕ್ರೀಡಾಂಗಣದಲ್ಲಿ ಹಾಜರಿರಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಯೋಗ ದಿನದಂದು ಶಾಲಾ, ಕಾಲೇಜು, ವಸತಿ ಶಾಲೆಗಳ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಯೋಗ ದಿನಾಚರಣೆಯ ಯಶಸ್ಸಿಗೆ ಎಲ್ಲರ ಸಹಭಾಗಿತ್ವ ಬಹುಮುಖ್ಯವಾಗಿದ್ದು, ಯೋಗ ದಿನಾಚರಣೆಯ ಬಗ್ಗೆ ಹೆಚ್ಚಿನ ರೀತಿಯಲ್ಲಿ ಪ್ರಚಾರ ನಡೆಸಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವ ಹಾಗೆ ನೋಡಿಕೊಳ್ಳಬೇಕು. ಕಾರ್ಯಕ್ರಮ ಸ್ಥಳದಲ್ಲಿ ಅಗತ್ಯ ಕುಡಿಯುವ ನೀರು ಮತ್ತು ಯೋಗಾಸನಕ್ಕೆ ಸಂಬAಧಿಸಿದAತೆ ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮ ದಿನದಂದು ಅಗತ್ಯ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಕುರಿತಂತೆ ಪೊಲೀಸ್ ಇಲಾಖೆಗೆ ಪತ್ರ ಬರೆದು ಕ್ರಮ ಕೈಗೊಳ್ಳಬೇಕು. ಆರೋಗ್ಯ ಇಲಾಖೆಯಿಂದ ಅಂಬ್ಯುಲೆನ್ಸ್ ಒದಗಿಸಬೇಕು. ನಗರಸಭೆಯಿಂದ ಕ್ರೀಡಾಂಗಣದ ಸ್ವಚ್ಛತೆಗೆ ಕ್ರಮ ವಹಿಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಹಾಗೂ ಬಿಸ್ಕೆಟ್‌ಗಳನ್ನು ಒದಗಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಯಮನಪ್ಪ ಶಿರವಾರ ಅವರು ಮಾತನಾಡಿ, ಅಂತಾರಾಷ್ಟಿçÃಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಜೂನ್ 10 ರಿಂದ 21 ರವರೆಗೆ ಯೋಗೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಲೆ, ವಸತಿ ಶಾಲೆಗಳಿಗೆ ಯೋಗ ತರಬೇತಿದಾರರು ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡುತ್ತಾರೆ. ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಯೋಗ ದಿನಾಚರಣೆ ನಡೆಸಲು ಎಲ್ಲ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಎಸ್‌ಪಿ ಹೇಮಂತ್‌ಕುಮಾರ್ ಎನ್., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕರಾದ ಡಾ.ಪಿ.ಎಂ.ಮಲ್ಲಯ್ಯ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗರಾಜ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ, ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.
Comments are closed.