ಬಕ್ರೀದ್ ಹಬ್ಬ: ಶಾಂತಿ ಪಾಲನೆಗೆ ಕ್ರಮವಹಿಸಲು ಸೂಚನೆ

Get real time updates directly on you device, subscribe now.

 : ಜೂನ್ 17 ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ವೇಳೆಯಲ್ಲಿ ಪ್ರಾಣಿವಧೆ, ಜಾನುವಾರು ಸಾಗಣೆ ತಡೆಗಟ್ಟಲು ಸಂಬAಧಪಟ್ಟ ಅಧಿಕಾರಿಗಳು ಕಾಯ್ದೆಯನ್ವಯ ಅಗತ್ಯ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ. ಕಡಿ ಅವರು ಹೇಳಿದರು.
ಬಕ್ರೀದ್ ಹಬ್ಬದ ಪ್ರಯುಕ್ತ ಜೂನ್ 13 ರಂದು  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ  ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಅಗತ್ಯ ಸ್ಥಳಗಳಲ್ಲಿ ಚೆಕ್‌ಪೋಸ್ಟ್ ತೆರೆಯಬೇಕು. ಚೆಕ್‌ಪೋಸ್ಟಗಳಲ್ಲಿ ಪೊಲೀಸ್ ಹಾಗೂ ಪಶು ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಯು ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಅಧಿಕೃತ ವಧಾಗಾರ ಕೊಪ್ಪಳ ನಗರಪ್ರದೇಶದಲ್ಲಿ ಮಾತ್ರವಿದ್ದು, ಅಲ್ಲಿಯೇ ನಿರ್ದಿಷ್ಟ ಪ್ರಾಣಿವಧೆ ನಡೆಸಬೇಕು. ಗ್ರಾಮ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸೂಚಿತ ಸ್ಥಳಗಳಲ್ಲಿ ಮಾತ್ರ ಪ್ರಾಣಿವಧೆ ನಡೆಸಬೇಕು. ನಿಯಮ ಬಾಹಿರವಾಗಿ ಹಾಗೂ ಅನಧಿಕೃತ ಪ್ರಾಣಿಗಳನ್ನು ಬಲಿ ಕೊಡುವಂತಿಲ್ಲ. ಅದರಂತೆ ಯಾರ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ ಪರಸ್ಪರ ಸವಹಾರ್ದತೆಯಿಂದ ಹಬ್ಬವನ್ನು ಆಚರಿಸಲು ಅನುಕೂಲವಾಗುವಂತೆ ಅಧಿಕಾರಿಗಳು ಹಾಗೂ ಸಮುದಾಯದವರು ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.
ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ -2020 ರನ್ವಯ ಅಕ್ರಮವಾಗಿ ಪ್ರಾಣಿಗಳ ಸಾಗಾಣಿಕೆ ನಿಯಮ ಬಾಹಿರವಾಗಿದ್ದು, ಎಲ್ಲ ವಯಸ್ಸಿನ ಆಕಳು, ಆಕಳು ಕರು, ಹೋರಿ, ಎತ್ತು ಅಲ್ಲದೆ 13 ವರ್ಷದೊಳಗಿನ ಎಮ್ಮೆ, ಕೋಣ, ಒಂಟೆಗಳನ್ನು ಹತ್ಯೆ ಮಾಡುವಂತಿಲ್ಲ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಕಾಯ್ದೆ ಉಲ್ಲಂಘನೆಯಾಗದAತೆ ನೋಡಿಕೊಳ್ಳುವ ಅತ್ಯವಶ್ಯಕತೆ ಇದ್ದು, ಈ ಕುರಿತು ಸಂಬAಧಿಸಿದ ತಂಡಗಳು ಸೂಕ್ತ ನಿಗಾ ವಹಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಬಕ್ರೀದ್ ಹಬ್ಬದ ಹಿನ್ನೆಲೆ ಎಲ್ಲ ತಾಲೂಕುಗಳಲ್ಲಿ ವಿವಿಧ ಸಮುದಾಯ ಮುಖಂಡರೊAದಿಗೆ ಶಾಂತಿ ಸಭೆ ನಡೆಸಬೇಕು ಎಂದು ಹೇಳಿದರು.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ ಪಿ.ಎಂ.ಮಲ್ಲಯ್ಯ ಅವರು ಮಾತನಾಡಿ, ಪ್ರಾಣಿ ಹಿಂಸೆ ಪ್ರತಿಬಂಧಕ ಕಾಯ್ದೆ-1960 ಪ್ರಕಾರ ಯಾವುದೇ ಪ್ರಾಣಿಯನ್ನು ಹೊಡೆಯುವುದು, ಒದೆಯುವುದು, ಸವಾರಿ ಮಾಡುವುದು, ಅತೀಭಾರ ಹೇರುವುದು, ಚಿತ್ರಹಿಂಸೆ ನೀಡುವುದು, ನಿಗದಿತ ಸಮಯಕ್ಕಿಂತ ಮೀರಿ ಬಂಧಿಸುವುದು, ಮಾಲೀಕನಾಗಿ ಅವಶ್ಯಕ ನೀರು, ಆಹಾರ, ನೆಲೆ ಸಕಾಲದಲ್ಲಿ ನೀಡದೇ ಇರುವುದು, ಪ್ರಾಣಿಗಳನ್ನು ಗಾಯಗೊಳಿಸುವುದು, ಕೊಲ್ಲುವುದು, ಪ್ರಾಣಿಗಳ ಕಾದಾಟ ಮಾಡಿಸುವುದು ಇನ್ನಿತರೆ ಪ್ರಾಣಿ ಹಿಂಸೆ ಕೃತ್ಯಗಳನ್ನು ಈ ಕಾಯ್ದೆಯನ್ವಯ ನಿಷೇಧಿಸಲಾಗಿದೆ. ಇಂತಹ ಕೃತ್ಯದಲ್ಲಿ ಭಾಗಿಯಾದಲ್ಲಿ ದಂಡ ಸಹಿತ 3 ತಿಂಗಳವರೆಗೆ ಕಾರಾಗೃಹ ವಾಸದ ಸಜೆ  ಇದೆ ಎಂದು ಸಭೆಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೋಲಿಸ್ ಅಧಿಕ್ಷಕರಾದ ಆರ್. ಹೇಮಂತ್‌ಕುಮಾರ್, ಕೊಪ್ಪಳ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಡಿವೈಎಸ್‌ಪಿ ಮುತ್ತಣ್ಣ ಸವರಗೋಳ್, ಕನಕಗಿರಿ ತಹಶೀಲ್ದಾರರಾದ ವಿಶ್ವನಾಥ ಮುರುಡಿ ಸೇರಿದಂತೆ ಪಶು ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: