ಯಾವುದೇ ಮಗು ಲಸಿಕೆಯಿಂದ ವಂಚಿತವಾಗದAತೆ ಕ್ರಮ ವಹಿಸಿ: ಡಿಸಿ ನಲಿನ್ ಅತುಲ್

Get real time updates directly on you device, subscribe now.

: ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ನಿಯಮನುಸಾರ ನಿಗದಿತ ಅವಧಿಯಲ್ಲಿ ಲಸಿಕಾಕರಣ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಅಭಿಯಾನದಲ್ಲಿ ಜಿಲ್ಲೆಯ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದAತೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದರು.
ಜೂನ್ 12 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಸಮಿತಿಗಳ ಜಿಲ್ಲಾ ಮಟ್ಟದ ಸಮನ್ವಯ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಗು ಹುಟ್ಟಿದಾಗಿಂದ 16 ವರ್ಷದವರೆಗೆ ನಿಗದಿತ ಅವಧಿಯಲ್ಲಿ ಲಸಿಕೆಯನ್ನು ನೀಡಬೇಕು. ಪೊಲೀಯೋ, ದಡಾರ, ರುಬೆಲ್ಲಾದಂತಹ ಮಾರಕ ಖಾಯಿಲೆಗಳಿಂದ ಲಸಿಕೆಗಳು ಮಕ್ಕಳನ್ನು ರಕ್ಷಿಸುತ್ತವೆ. ಈ ಬಗ್ಗೆ ಮಗುವಿನ ಜನನದ ಸಮಯದಲ್ಲಿ ಪೋಷಕರಿಗೆ ವೈದ್ಯರು ಸೂಕ್ತ ತಿಳುವಳಿಕೆ ನೀಡಬೇಕು. ಲಸಿಕೆ ಪಡೆದ ಮಕ್ಕಳ ಸಮೀಕ್ಷೆ ಸಂದರ್ಭದಲ್ಲಿ ಲಸಿಕೆ ಪಡೆಯದ ಮಕ್ಕಳ ಮಾಹಿತಿ ದೊರೆಯುತ್ತದೆ. ಅಂತಹ ಮಕ್ಕಳು ಲಸಿಕೆಯಿಂದ ವಂಚಿತರಾಗಿರುವುದಕ್ಕೆ ಕಾರಣಗಳನ್ನು ತಿಳಿದು, ಮುಂದಿನ ದಿನಗಳಲ್ಲಿ ಅದು ಮರುಕಳಿಸದಂತೆ ಪೋಷಕರಿಗೆ ತಿಳಿಸಬೇಕು. ಜಿಲ್ಲೆಯ ಎಲ್ಲ ಶಾಲೆ, ಅಂಗನವಾಡಿಗಳಲ್ಲಿ ಪೂರ್ವಪ್ರಾಥಮಿಕ ಶಿಕ್ಷಣ ಆರಂಭಗೊAಡಿದ್ದು, ಈ ಸಮಯದಲ್ಲಿ ಶಾಲೆಗೆ ಮಕ್ಕಳು ದಾಖಲಾಗುವಾಗ ಆ ಮಗು ಆ ಸಮಯದವರೆಗಿನ ನಿರ್ದಿಷ್ಟ ಲಸಿಕೆಗಳನ್ನು ಪಡೆದಿರುವ ಕುರಿತು ಖಾತ್ರಿಪಡಿಸಿಕೊಳ್ಳಿ. ಮಗುವಿನ ಪ್ರತಿ ಲಸಿಕೆಯ ಬಗ್ಗೆ ತಾಯಿ ಕಾರ್ಡ್ಗಳಲ್ಲಿ ದಾಖಲು ಮಾಡಿರುತ್ತದೆ. ಒಂದು ವೇಳೆ ತಾಯಿ ಕಾರ್ಡ್ ಇಲ್ಲದಿದ್ದಲ್ಲಿ ಮಗು ಲಸಿಕೆ ಪಡೆದ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಪರ್ಯಾಯ ಮಾರ್ಗ, ದಾಖಲೆಗಳನ್ನು ಹುಡುಕಿ. ಜಿಲ್ಲೆಯ ಯಾವ ಮಗುವೂ ಲಸಿಕೆಯಿಂದ ವಂಚಿತವಾಗದAತೆ ಅಗತ್ಯ ಕ್ರಮ ವಹಿಸಿ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ತಾಯಿ ಮತ್ತು ಶಿಶು ಮರಣ ಪ್ರಮಾಣ ಪರಿಶೀಲನಾ ಸಭೆ :
ಹೆರಿಗೆ ಸಂದರ್ಭ ಹಾಗೂ ಹೆರಿಗೆಯ ನಂತರ ತಾಯಂದಿರು ಮರಣ ಹೊಂದಲು ರಕ್ತಹೀನತೆ, ಅಧಿಕ ಹಾಗೂ ಕಡಿಮೆ ರಕ್ತದೊತ್ತಡ, ಹೆರಿಗೆ ಸಮಯದಲ್ಲಿನ ಆಘಾತದಿಂದ ಹೃದಯದ ತೊಂದರೆ ಸೇರಿದಂತೆ ಅನೇಕ ಕಾರಣಗಳಿಂದ ಮರಣ ಹೊಂದಬಹುದು. ಆದ್ದರಿಂದ ಗರ್ಭಿಣಿ ಮಹಿಳೆಯ ಕುಟುಂಬದವರು, ಆಶಾ ಕಾರ್ಯಕರ್ತೆಯರು, ಸ್ಥಳೀಯ ಅಥವಾ ಗರ್ಭಿಣಿ ಮಹಿಳೆಯ ತಪಾಸಣೆ ಮಾಡುವ ವೈದ್ಯಾಧಿಕಾರಿಗಳು ಪ್ರಾರಂಭದಲ್ಲಿಯೇ ಆಕೆಯ ಆರೋಗ್ಯ ಸಮಸ್ಯೆಯನ್ನು  ಗುರುತಿಸಿ, ಸೂಕ್ತ ಚಿಕತ್ಸೆ ಹಾಗೂ ಆರೈಕೆಗೆ ಶಿಫಾರಸು ಮಾಡಬೇಕು. ತಾಯಿ ಕಾರ್ಡ್ಗಳಲ್ಲಿ ತೊಡಕಿನ ಗರ್ಭಧಾರಣೆ ಹಾಗೂ ತೊಡಕಿಲ್ಲದ ಗರ್ಭಧಾರಣೆ ಎಂದು ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿಗಳು ಆಶಾ ಹಾಗೂ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ ಅವರು ಮಾತನಾಡಿ, ಹೆರಿಗೆ ಸಂದರ್ಭ ಹಾಗೂ ಹೆರಿಗೆ ನಂತರದಲ್ಲಿ ಮೃತಪಡುವ ತಾಯಂದಿರ ಪ್ರಕರಣಗಳಲ್ಲಿ ಮಹಿಳೆ ಗರ್ಭಿಣಿಯಾದಾಗಿನಿಂದ ರಕ್ತಹೀನತೆಯಿಂದ ಬಳಲುತ್ತಿದ್ದು, ಸೂಕ್ತ ಚಿಕತ್ಸೆ ಹಾಗೂ ಆರೈಕೆಯ ಕೊರತೆಯಿಂದ ಹೆರಿಗೆ ಸಂದರ್ಭದಲ್ಲಿ ರಕ್ತದೊತ್ತಡ, ಹೆರಿಗೆ ಸಮಯದಲ್ಲಿನ ತೀವ್ರ ಆಘಾತಕ್ಕೆ ಒಳಗಾಗಿರುವುದು ಕಂಡು ಬಂದಿರುತ್ತದೆ. ಇಂತಹ ಪ್ರಕರಣಗಳಲ್ಲಿ ಬಹಳಷ್ಟು ಪ್ರಕರಣಗಳು ಬೇರೆ ಜಿಲ್ಲೆಯ ಪ್ರಕರಣಗಳಾಗಿದ್ದು, ಗರ್ಭಿಣಿ ತೀವ್ರ ಗಂಭೀರ ಪರಿಸ್ಥಿತಿ ತಲುಪಿದ ನಂತರ ಆಕೆಯನ್ನು ಜಿಲ್ಲೆಯ ಜಿಲ್ಲಾಸ್ಪçತ್ರೆಗೆ ದಾಖಲು ಮಾಡಲಾಗುತ್ತದೆ. ಕೆಲ ಪ್ರಕರಣಗಳಲ್ಲಿ ಹೆರಿಗೆಯ ನಂತರ ವೈದ್ಯರ ಸಲಹೆಯನ್ನು ಮೀರಿ ಬಾಣಂತಿ ಹಾಗೂ ಮಗುವನ್ನು ಮನೆಗೆ ಕರೆದುಕೊಂಡು ಹೋಗುತ್ತಾರೆ. ಅಲ್ಲಿ ಇತರೆ ಕಾರಣಗಳಿಂದ ಆಗುವ ಸೋಂಕುಗಳಿAದ ಮಹಿಳೆ ಅಥವಾ ಮಗು ಸಾವನ್ನಪ್ಪಬಹುದು. ಆದ್ದರಿಂದ ಜಿಲ್ಲೆಯ ಪ್ರಸೂತಿ ತಜ್ಞರು ತಮ್ಮ ಹಂತದಲ್ಲಿ ನಿರ್ವಹಣೆ ಮಾಡಲು ಸಾಧ್ಯವಾಗದ ಪ್ರಕರಣಗಳನ್ನು ಕೂಡಲೇ ಜಿಲ್ಲಾಸ್ಪತ್ರೆ ಅಥವಾ ಕಿಮ್ಸ್ಗೆ ಶಿಫಾರಸ್ಸು ಮಾಡುವಂತೆ ಸೂಚನೆ ನೀಡಲಾಗಿದೆ. ಬೇರೆ ಜಿಲ್ಲೆಯ ಪ್ರಕರಣಗಳಲ್ಲಿ ಸಂಬAಧಿಸಿದ ಜಿಲ್ಲಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಕ್ಷಯರೋಗ ಪಾಲುದಾರರ ಸಭೆ :
ಜಿಲ್ಲೆಯಲ್ಲಿ ನಿರ್ದಿಷ್ಟವಾಗಿ ಕ್ಷಯರೋಗ ಬಾಧಿತ ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಕ್ಷಯರೋಗಿಗಳಿರುವ ತಾಲ್ಲೂಕನ್ನು ಗುರುತಿಸಿ, ಆ ತಾಲ್ಲೂಕಿನಾದ್ಯಂತ ರ‍್ಯಾಂಡಮ್ ಆಗಿ ಮಾದರಿ ಪರೀಕ್ಷೆಗಳನ್ನು ಮಾಡಿ. ಈ ಪ್ರಯೋಗದಿಂದ ನಿರ್ದಿಷ್ಟ ಪ್ರದೇಶದಲ್ಲಿ ಎಷ್ಟು ಜನ ಕ್ಷಯರೋಗಿಗಳು ಇದ್ದಾರೆ ಮತ್ತು ಅದಕ್ಕೆ ಕಾರಣಗಳು, ತಡೆಗಟ್ಟುವ ಕ್ರಮಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಿ. ಕ್ಷಯರೋಗ ಸಂಪೂರ್ಣ ವಾಸಿ ಮಾಡಬಹುದಾದ ಖಾಯಿಲೆಯಾಗಿದ್ದು, ಅದನ್ನು ಪ್ರಾರಂಭಿಕ ಹಂತದಲ್ಲಿಯೇ ಗುರುತಿಸಿ, ಸೂಕ್ತ ಹಾಗೂ ನಿರಂತರ ಚಿಕಿತ್ಸೆ ಪಡೆಯುವುದು ಮುಖ್ಯ. ಈ ಬಗ್ಗೆ ಜಿಲ್ಲೆಯಾದ್ಯಂತ ಜನರಲ್ಲಿ ಜಾಗೃತಿ ಮೂಡಿಸಿ. ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವ ಉಚಿತ ಪರೀಕ್ಷೆ, ಚಿಕಿತ್ಸೆ, ಸೌಲಭ್ಯಗಳ ಬಗ್ಗೆ ತಿಳುವಳಿಕೆ ಮೂಡಿಸಿ ಎಂದು ಜಿಲ್ಲಾಧಿಕಾರಿಗಳು ಕ್ಷಯರೋಗ ನಿರ್ಮೂಲನಾಧಿಕಾರಿಗೆ ತಿಳಿಸಿದರು.
ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಶಶಿಧರ ಅವರು ಮಾತನಾಡಿ, ಜನಸಂಖ್ಯೆ ಆಧಾರದಲ್ಲಿ ಟಿಬಿ ಪರೀಕ್ಷೆಗಳನ್ನು ನಡೆಸಿ ಜಿಲ್ಲೆಯಾದ್ಯಂತ 09 ಗ್ರಾಮ ಪಂಚಾಯತಿಗಳನ್ನು ಕ್ಷಯರೋಗ ಮುಕ್ತ ಗ್ರಾಮ ಪಂಚಾಯತಿಗಳೆAದು ಗುರುತಿಸಲಾಗಿದೆ. ಪ್ರಸಕ್ತ ವರ್ಷ ಇನ್ನೂ 11 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದ್ದು, ಸಂಬAಧಿಸಿದ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಗ್ರಾಮ ಸಭೆ, ಇಲಾಖೆಯ ವಿವಿಧ ಕಾರ್ಯಕ್ರಮಗಳಲ್ಲಿ ಟಿಬಿ ಪರೀಕ್ಷೆ, ಚಿಕಿತ್ಸೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ಹಾಗೂ ಗಂಗಾವತಿ ಪ್ರಾಣೇಶ ಅವರನ್ನು ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ರಾಯಭಾರಿಗಳನ್ನಾಗಿ ಮಾಡಲಾಗಿದ್ದು, ಇವರ ಮೂಲಕ ವಿವಿಧ ಜಾಗೃತಿ ಜಾಥಾ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಗ್ರಾಮ ಮಟ್ಟಗಳಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಮಹಿಳಾ ಸಂಘಗಳ ಅಧ್ಯಕ್ಷರ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಪ್ರತಿ ತಿಂಗಳ 24ನೇ ತಾರೀಖಿನಂದು ನಿಕ್ಷಯ ದಿವಸ ಹಾಗೂ ಪ್ರತಿ ಗುರುವಾರದಂದು ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ಸಾಲೆ, ಕೆಲಸದ ಸ್ಥಳಗಳಲ್ಲಿ ಕ್ಷಯಮುಕ್ತ ವಾತಾವರಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನ ಮಾಡಲಾಗುತ್ತಿದೆ. ರೋಗವನ್ನು ತಡವಾಗಿ ಗುರುತಿಸುವುದು ಕ್ಷಯರೋಗಿಗಳ ಸಾವಿಗೆ ಮುಖ್ಯ ಕಾರಣವಾಗುವುದರಿಂದ ಪ್ರಾರಂಭಿಕ ಲಕ್ಷಣಗಳು ಕಂಡುಬAದ ಕೂಡಲೇ ಪರೀಕ್ಷೆಗೆ ಒಳಪಡುವಂತೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ :
ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳಿಂದ ಶಾಲಾ, ಕಾಲೇಜು ಮಕ್ಕಳು ಯುವಕರು ಹೆಚ್ಚು ತೊಂದರೆಗೊಳಗಾಗುವ ಸಾಧ್ಯತೆ ಇರುತ್ತದೆ. ಇಂತಹ ವಸ್ತುಗಳು ಮಕ್ಕಳನ್ನು, ಯುವಕರನ್ನು ಹೆಚ್ಚಾಗಿ ಆಕರ್ಷಿಸುತ್ತವೆ. ಆದ್ದರಿಂದ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ. ಶಾಲೆ, ಕಾಲೇಜುಗಳ ಸುತ್ತ ಮುತ್ತ ನಿಗದಿತ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮರಾಟ ಮಾಡುವುದು ಗಂಭೀರ ಅಪರಾಧವಾಗಿದ್ದು, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು ಈ ಬಗ್ಗೆ ಗಮನ ವಹಿಸಿ ಅಗತ್ಯ ಕ್ರಮ ವಹಿಸಬೇಕು. 18 ವರ್ಷ ಕೆಳಗಿನ ಮಕ್ಕಳಿಗೆ ತಂಬಾಕು, ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಕಂಡುಬAದಲ್ಲಿ ಅಂತಹವರಿಗೆ ಕೋಟ್ಪಾ ಕಾಯಿದೆ ಮಾತ್ರವಲ್ಲದೆ ಬಾಲ ನ್ಯಾಯ ಮಂಡಳಿ ಕಾಯ್ದೆ(ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯ್ದೆ) ಅನ್ವಯ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕು.  ಸ್ಥಳೀಯ ಸಂಸ್ಥೆಗಳಲ್ಲಿ ತಂಬಾಕು ಮಾರಾಟ ಅಂಗಡಿಗಳಿಗೆ ಪರವಾನಿಗೆ ನೀಡುವಾಗಿ ಕೋಟ್ಪಾ ಕಾಯಿದೆಯ ಕಲಂ 05, 6ಎ, 6ಬಿ ಹಾಗೂ ಇತರೆ ನಿರ್ದಿಷ್ಟ ಕಲಂಗಳ ಬಗ್ಗೆ ಮಾಹಿತಿ ನೀಡಿ, ಕಡ್ಡಾಯವಾಗಿ ಪಾಲಿಸುವಂತೆ ನಿಯಮವನ್ನು ಹಾಕಿ ಪರವಾನಿಗೆ ನೀಡಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ನಂದಕುಮಾರ ಎಚ್. ಅವರು ಮಾತನಾಡಿ, ಜಿಲ್ಲೆಯಾದ್ಯಂತ 18629 ಶಾಲಾ ಮಕ್ಕಳಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಜಾಥಾಗಳ ಮೂಲಕ, ಬೀದಿ ನಾಟಕ, ವಿವಿಧ ಕಾರ್ಯಕ್ರಮಗಳಲ್ಲಿ ಈ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ತಂಬಾಕು ವ್ಯಸನಿಗಳಿಗೆ ಸೂಕ್ತ ಪುನರ್ವಸತಿ ಕಲ್ಪಿಸಿ, ವ್ಯಸನಮುಕ್ತರನ್ನಾಗಿ ಮಾಡಲು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಘಟಕ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಸೂಕ್ತ ಆಪ್ತಸಮಾಲೋಚನೆ, ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಕೋಟ್ಪಾ ಕಾಯ್ದೆಯ ಸಮರ್ಪಕ ಅನುಷ್ಠಾನ ಹಾಗೂ ವ್ಯಸನ ಮುಕ್ತ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೈಗೊಂಡ ಕ್ರಮಗಳು ಹಾಗೂ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ರೇಬಿಸ್ ನಿಯಂತ್ರಣ ಕೋಶದ ಸಭೆ :
ಜಿಲ್ಲೆಯಲ್ಲಿ ನಾಯಿ ಕಡಿತದಿಂದ ತೊಂದರೆಗೊಳಗಾದವರಿಗೆ ನಗರ ಪ್ರದೇಶ ಹಾಗೂ ಗ್ರಾಮ ಮಟ್ಟದಲ್ಲಿ ನಿಗದಿಪಡಿಸಿದ ಪರಿಹಾರ ಮೊತ್ತವನ್ನು ಚಿಕಿತ್ಸೆಗಾಗಿ ನೀಡಬೇಕು. ಒಂದು ವೇಳೆ ನಾಯಿ ಕಡಿತ ಮಾನವ ಸಾವು ಸಂಭವಿಸಿದರೆ ರೂ.5 ಲಕ್ಷಗಳ ಪರಿಹಾರವನ್ನು ಕುಟುಂಬದವರಿಗೆ ನೀಡಬೇಕು. ಈ ಬಗ್ಗೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಲಕಾರಿ ರಾಮಪ್ಪ ಒಡೆಯರ್, ಹೆಚ್ಚುವರಿ ಎಸ್‌ಪಿ ಹೇಮಂತ್‌ಕುಮಾರ್ ಎನ್., ಆರ್‌ಸಿಎಚ್ ಅಧಿಕಾರಿ ಡಾ.ಪ್ರಕಾಶ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ ಎಂ.ಎಚ್., ಸೇರಿದಂತೆ ಎಲ್ಲ ತಾಲ್ಲೂಕಾ ವೈದ್ಯಾಧಿಕಾರಿಗಳು, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: