ಮಕ್ಕಳನ್ನು ಬಾಲ ಕಾರ್ಮಿಕತೆಯಿಂದ ತಪ್ಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು

Get real time updates directly on you device, subscribe now.

 : ಬಾಲ ಕಾರ್ಮಿಕ ಪದ್ಧತಿಯನ್ನು ತೊಲಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ  ಮಲಕಾರಿ ರಾಮಪ್ಪ ಒಡೆಯರ್ ಅವರು ಹೇಳಿದರು.
ಕೊಪ್ಪಳ ತಾಲೂಕು  ಆಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕಾರ್ಮಿಕ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವರುಗಳ ಸಂಯುಕ್ತ ಆಶ್ರಯದಲ್ಲಿ
ನಗರದ ಬಹದ್ದೂರ್ ಬಂಡಿ ರಸ್ತೆಯ ಸರಸ್ವತಿ ವಿದ್ಯಾ ಮಂದಿರದಲ್ಲಿ ಜೂನ್ 12ರಂದು ನಡೆದ ವಿಶ್ವ ಬಾಲಕಾರ್ಮಿಕ  ಪದ್ಧತಿ ವಿರೋಧಿ ದಿನಾಚರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳು ಶಿಕ್ಷಣದಿಂದ ಹೇಗೆ ವಂಚಿತರಾಗುತ್ತಾರೆ ಎಂಬುದನ್ನು ಪ್ರತಿಯೊಬ್ಬ ಶಿಕ್ಷಕರು ಅರಿಯಬೇಕು. ಕಲಿಕೆ ಮಾಡುವುದರ ಜತೆಗೆ ಮಕ್ಕಳ ಪಾಲಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆತರುವ ಮಹತ್ವದ ಈ ಸಮಾಜ ಸೇವಾ ಕಾರ್ಯವನ್ನು ಶಿಕ್ಷಕ ಸಮೂಹ ಸಂಸ್ಥೆಯಿAದ ಮಾಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಬಾಲ ಕಾರ್ಮಿಕ ಕಾಯ್ದೆಯ ತಿದ್ದುಪಡಿ ನಂತರ ಕಠಿಣ ಕ್ರಮ ವಹಿಸಲಾಗಿದೆ. ಮಕ್ಕಳನ್ನು ಬಳಸಿಕೊಳ್ಳುವ ಮಾಲೀಕರ ಮೇಲೆ ಎಫ್ ಐ ಆರ್ ಗಳನ್ನು ದಾಖಲೆ ಮಾಡಲಾಗುತ್ತಿದೆ. ಶಿಕ್ಷಣದಿಂದ ಯಾರು ಕೂಡಾ ವಂಚಿತರಾಗಬೇಡಿ ಎಂದು ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಅವರು ಮಾತನಾಡಿ, ಬಾಲ ಕಾರ್ಮಿಕರು ಕಂಡುಬAದಲ್ಲಿ ನಮ್ಮ ಇಲಾಖೆಗೆ ಮಾಹಿತಿ ನೀಡಿ, ನಮ್ಮ ಇಲಾಖೆ ವಿವಿಧ ಇಲಾಖೆಗಳ ಸಹಯೋಗ ಪಡೆದು ಮಕ್ಕಳನ್ನು ರಕ್ಷಣೆ ಮಾಡುತ್ತೇವೆ ಎಂದು ತಿಳಿಸಿದರು.
ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ ಅವರು ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆಯ ನಿಷೇಧ ಮತ್ತು ನಿಯಂತ್ರಣ ಕಾಯ್ದೆ(1986)-2016 ಜಾರಿಯಲ್ಲಿದೆ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವವರಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆ ಇದ್ದು, ಅಂತಹ ಕ್ಷೇತ್ರಗಳಲ್ಲಿ ಮಕ್ಕಳನ್ನು ದುಡಿಸಿಕೊಳ್ಳುತ್ತಿರುವುದು ಕಂಡುಬAದಲ್ಲಿ 1098 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ, ಮಕ್ಕಳ ರಕ್ಷಣೆ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ ಕಣವಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಜಯಶ್ರೀ ಆರ್, ಸರಸ್ವತಿ ವಿದ್ಯಾಮಂದಿರದ ಮುಖ್ಯೋಪಾಧ್ಯಾಯರಾದ ರೇಣುಕಾ ಹೆಚ್. ಅತ್ತನೂರ್ ಕೊಪ್ಪಳ ಕಾರ್ಮಿಕ ನಿರೀಕ್ಷಕರಾದ ಶಿವಶಂಕರ್ ತಳವಾರ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಗೂ ಸರಸ್ವತಿ ವಿದ್ಯಾಮಂದಿರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: