ಹಾಸ್ಟೆಲ್ ಹೋಸ ಪ್ರವೇಶಕ್ಕೆ ಅರ್ಜಿ ಕರೆಯಲು SFI ಆಗ್ರಹ
ರಾಜ್ಯದಲ್ಲಿ ಶಾಲಾ ಕಾಲೇಜುಗಳು ಪ್ರಾರಂಭವಾಗಿ ಸುಮಾರು 15 ದಿನಗಳ ಕಾಲ ಆಗುತ್ತ ಬಂದರು ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳ ಮೂಲಕ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರು ವಸತಿ ನಿಲಯಗಳಲ್ಲಿ ಸಾವಿರಾರು ಸೀಟುಗಳು ಖಾಲಿ ಇದ್ದರು ಅರ್ಜಿ ಕರೆಯದೆ ನಿರ್ಲಕ್ಷ್ಯ ಮಾಡಿರವು ಸಂಬಂಧಿಸಿದ ಇಲಾಖೆಗಳ ನೀತಿಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ತೀವ್ರವಾಗಿ ಖಂಡಿಸುತ್ತದೆ ಈ ಕೂಡಲೇ ಅರ್ಜಿ ಕರೆಯಬೇಕು ಎಂದು ಆಗ್ರಹ ಮಾಡುತ್ತದೆ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಸಂಘಟನೆಯ ರಾಜ್ಯಾಧ್ಯಕ್ಷರಾದ ಅಮರೇಶ ಕಡಗದ ಆಗ್ರಹ ಮಾಡಿದ್ದಾರೆ.
ಈ ಕುರಿತು ಪತ್ರಿಕೆ ಪ್ರಕಟಣೆ ನೀಡರಿವು ಸಂಘಟನೆ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮುಗಿಸಿಕೊಂಡು ಈಗಾಗಲೇ ಮುಂದಿನ ಶಿಕ್ಷಣಕ್ಕೆ ಹೋಗಿರುತ್ತಾರೆ ಮತ್ತು ಹೋಸ ವಿದ್ಯಾರ್ಥಿಗಳು ಈಗಾಗಲೇ 5,6,7,8,9 ನೇ ಹಾಗೂ PUC ತರಗತಿಗಳಿಗೆ ದಾಖಲಾತಿ ಮಾಡಿಸಿದ್ದಾರೆ ರಾಜ್ಯದ ಮತ್ತು ಜಿಲ್ಲೆಯಲ್ಲಿ ಬಹುತೇಕ ಶಾಲಾ-ಕಾಲೇಜ್ ಗಳಲ್ಲಿ ತರಗತಿಗಳು ಪ್ರಾರಂಭವಾಗಿವೆ ಹಲವಾರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಮ್ಮ ಮುಂದಿನ ಶಿಕ್ಷಣದ ವಸತಿಗಾಗಿ ಹಾಸ್ಟೆಲ್ ಮೇಲೆ ಅವಲಂಬಿತರಾಗಿದ್ದಾರೆ.
ಕಳೆದ ವರ್ಷ ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ ಮೇ ತಿಂಗಳಲ್ಲಿ ಅರ್ಜಿ ಆಹ್ವಾನ ಮಾಡಿ ಜೂನ್ ತಿಂಗಳ 10 ನೇ ದಿನಾಂಕ ಒಳಗಡೆ ಅರ್ಜಿ ತೆಗೆದುಕೊಂಡು ಅರ್ಜಿ ಪ್ರಕ್ರಿಯೆ ಮುಗಿಸಿದ್ದರು ಆದರೆ ಈ ಶೈಕ್ಷಣಿಕ ವರ್ಷ ಜೂನ್ 14 ಮುಗಿದರು ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಹೋಸ ಪ್ರವೇಶಕ್ಕೆ ಅರ್ಜಿ ಕರೆಯದು ನಿರ್ಲಕ್ಷ್ಯ ಮಾಡುತ್ತಿರುವುದನ್ನು ಗಮನಿಸಿದರೆ ಸರಕಾರ ಗ್ರಾಮೀಣ ಪ್ರದೇಶದ ಬಡ,ದಲಿತ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಆಧ್ಯತೆ ನೀಡಿದೆ ಇರವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಮತ್ತು ನಮ್ಮ ಜಿಲ್ಲೆಯವರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಇದ್ದರು ಇಷ್ಟೊಂದು ನಿರ್ಲಕ್ಷ್ಯ ಮಾಡುತ್ತಿರುವುದು ಸರಿಯಲ್ಲ ಸಚಿವರು ಈ ಕೂಡಲೇ ಗಮನ ಹರಿಸಬೇಕು ಇಲ್ಲದಿದ್ದಲ್ಲಿ ರಾಜ್ಯಾದಂತ ಹೋರಾಟಕ್ಕೆ ಮುಂದಾಗ ಬೇಕಾಗುತ್ತದೆ ಎಂದರು.
ವಿದ್ಯಾರ್ಥಿಗಳು ಶಾಲಾ ಕಾಲೇಜಿನ ತರಗತಿಗೆ ಹಾಜರಾಗಬೇಕೆಂದರೆ ಜಿಲ್ಲೆಯಲ್ಲಿ ಸಮಯಕ್ಕೆ ಬಸ್ ಸೌಲಭ್ಯಗಳು ಇಲ್ಲ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಅರ್ಜಿ ಹಾಕಲು ದಿನ್ಯನಿತ್ಯ ಕಂಪ್ಯೂಟರ್ ಸೆಂಟರ್ ಗಳಿಗೆ ಅಲೆದಾಡುತ್ತ ಇದ್ದರೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಎಲ್ಲಾ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಿ ಏಕೆಂದರೆ ಇನ್ನೂ ವಿಳಂಬ ಮಾಡಿದರೆ ಅರ್ಜಿ ಪ್ರಕ್ರಿಯೆ ಪ್ರಾರಂಭ ಮಾಡಿ ಮುಗಿವದರ ಒಳಗೆ ಅಗಸ್ಟ್ ತಿಂಗಳ ಬಂದು ಬಿಡುತ್ತದೆ ಶಾಲಾ-ಕಾಲೇಜ್ ಪ್ರಾರಂಭವಾದ ತಕ್ಷಣ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಕರೆದ ರಾಜ್ಯದ ಹಾಗೂ ಜಿಲ್ಲೆಯ ಎಲ್ಲಾ ಬಡ,ದಲಿತ,ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿ ಶಿಕ್ಷಣಕ್ಕೆ ಆದ್ಯತೆ ಕೊಡಲು ಸರಕಾರ ಶ್ರಮವಹಿಸಲಿ ಎಂದು *ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಸಂಘಟನೆಯ ರಾಜ್ಯಾಧ್ಯಕ್ಷ ಅಮರೇಶ ಕಡಗದ ಜಿಲ್ಲೆಯ ಪ್ರಮುಖರಾದ ಸಿದ್ದಪ್ಪ, ಗ್ಯಾನೇಶ, ಶಿವಕುಮಾರ್, ಬಾಲಜಿ,ಶರೀಫ್, ಮಂಜುನಾಥ ಆಗ್ರಹಿಸಿ ಮಾಡಿದ್ದಾರೆ*
Comments are closed.