ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಕೊಪ್ಪಳ, : ಜಿಲ್ಲಾ ಪೊಲೀಸ್ ಕಾರ್ಯಾಲಯದಿಂದ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ (ಡಿಎಆರ್) & ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯಶೋಧ ವಂಟಗೋಡಿ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದ 2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶದ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್)-420 ಹುದ್ದೆಗಳ ನೇಮಕಾತಿ ಕುರಿತು 2023ರ ಸೆಪ್ಟೆಂಬರ್ 10ರಂದು ಲಿಖಿತ ಪರೀಕ್ಷೆಯನ್ನು ಏರ್ಪಡಿಸಿ, ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ 1:5ರ ಅನುಪಾತದಲ್ಲಿ ದೈಹಿಕ ಸಾಮರ್ಥ್ಯ ಮತ್ತು ಸಹಿಷ್ಣುತೆ (ಪಿಎಸ್ಟಿ & ಇಟಿ) ಪರೀಕ್ಷೆಯನ್ನು 2024ರ ಫೆಬ್ರವರಿ 13ರಂದು ನಡೆಸಲಾಗಿತ್ತು.
ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ & ಮಹಿಳಾ) ಹುದ್ದೆಗಳಿಗೆ 2023ರ ಡಿಸೆಂಬರ್ 10ರಂದು ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ 1:5ರ ಅನುಪಾತದಲ್ಲಿ ದೈಹಿಕ ಸಾಮರ್ಥ್ಯ ಮತ್ತು ಸಹಿಷ್ಣುತೆ (PSಖಿ & ಇಖಿ) ಪರೀಕ್ಷೆಗಳನ್ನು 2024ರ ಮಾರ್ಚ್ 04ರಂದು ನಡೆಸಲಾಗಿರುತ್ತು.
ಈ ಹುದ್ದೆಗಳ ನೇಮಕಾತಿ ಕುರಿತು 1:1 ರ ಅನುಪಾತದ ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ (ಡಿಎಆರ್) & ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಜೂನ್ 14ರಂದು ಜಿಲ್ಲಾ ಪೊಲೀಸ್ ಕಚೇರಿಯಲ್ಲಿನ ಸೂಚನಾ ಫಲಕದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
Comments are closed.