ಪೆಟ್ರೋಲ್‌ , ಡಿಸೇಲ್‌ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Get real time updates directly on you device, subscribe now.

ಕೊಪ್ಪಳ: ಪೆಟ್ರೋಲ್‌ಹಾಗೂ ಡಿಸೇಲ್‌ಬೆಲೆ ಏರಿಕೆ ಖಂಡಿಸಿ ಕೊಪ್ಪಳದ ಭಾಗ್ಯನಗರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್‌ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಭಾಗ್ಯನಗರ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್‌ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್‌ಸರಕಾರ ಪೆಟ್ರೋಲ್‌ಹಾಗೂ ಡಿಸೇಲ್‌ಬೆಲೆಯನ್ನು ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಮೇಲೆ ಹೊರೆಯನ್ನು ಹೊರೆಸಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಗತ್ಯ ವಸ್ತುಗಳ ಬೆಲೆ ಸೇರಿದಂತೆ ಇನ್ನಿತರೆ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿದೆ. ಈ ಮೂಲಕ ರಾಜ್ಯ ಸರಕಾರ ಜನರ ಜೇಬಿಗೆ ಕತ್ತರಿ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್‌ಹಾಗೂ ಡಿಸೇಲ್‌ಬೆಲೆಯನ್ನು ಏರಿಕೆ ಮಾಡಿರುವುದರಿಂದ ಸಾರಿಗೆ ವೆಚ್ಚವೂ ಹೆಚ್ಚಾಗಲಿದೆ. ಇದರ ಪರಿಣಾಮ ಬೇರೆ ಬೇರೆ ಕ್ಷೇತ್ರಗಳ ಮೇಲೂ ಆಗಲಿದ್ದು ದಿನಸಿ ವಸ್ತುಗಳು ಸೇರಿದಂತೆ ಇನ್ನಿತರೆ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಗೆ ಕಾರಣವಾಗಲಿದೆ ಎಂದು ರಾಜ್ಯ ಕಾಂಗ್ರೆಸ್‌ಸರಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿದರು. ಅಲ್ಲದೆ ಅಗತ್ಯ ವಸ್ತುಗಳು ಸೇರಿದಂತೆ ಬೆಲೆ ಏರಿಕೆಯನ್ನು ಸರಕಾರ ನಿಯಂತ್ರಿಸಬೇಕು ಹಾಗೂ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಾಜಾಪ ಮುಖಂಡರಾದ ಡಾಕ್ಟರ್ ಕೊಟ್ರೇಶ್ ಶೇಡ್ಮಿ, ಸತೀಶ್ ಮೇಘರಾಜ್ ಮಲ್ಲೇಶ್ ಬುಲ್ಟಿ ಜೀತು ಗಾಲ ಕೊಟ್ರೇಶ್ ಕವಲೂರು  ವೀರೇಶ್ ಗೊಂಡವಾಳ ಗಿರೀಶ್ ಪಾನಗಂಟಿ ರಾಜೇಶ್ ತಟ್ಟಿ ನೀಲಕಂಠಪ್ಪ ಮೈಲಿ ಕಿರಣ್ ಶಾವಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

Get real time updates directly on you device, subscribe now.

Comments are closed.

error: Content is protected !!
%d bloggers like this: