ಜಂಗಮ ಸಮಾಜದಿಂದಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Get real time updates directly on you device, subscribe now.


ಕೊಪ್ಪಳ,: ಶ್ರೀವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದಿಂದ ಜಂಗಮ ಸಮಾಜದ ಪ್ರತಿಭಾನ್ವಿತ 2023- 24ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಶ್ರೀವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಅದ್ಯಕ್ಷರಾದ ಅಜ್ಜಯ್ಯ ಹಿರೇಮಠ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಂಗಮ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಇದೇ ಜೂನ್ 22 ಶನಿವಾರ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಇದರ ಪ್ರಯುಕ್ತ
ಕೊಪ್ಪಳ ತಾಲೂಕಿನ ಜಂಗಮ ಸಮಾಜದ ಪ್ರತಿಭಾನ್ವಿತ 2023-24 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶೇ. 85% ಕ್ಕಿಂತ ಹೆಚ್ಚು ಅಂಕ ಪಡೆದ ಮತ್ತು ದ್ವಿತೀಯ ವರ್ಷದ ಪಿಯುಸಿಯ ವಾಣಿಜ್ಯ.ಕಲಾ ಮತ್ತು ಶಿಕ್ಷಣ ವಿಭಾಗದಲ್ಲಿ ಶೇ. 85%ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಪ್ರತಿಯೊಂದಿಗೆ ಅಂಕಪಟ್ಟಿ, ಪಾಸ್ ಪೋರ್ಟ್ ಫೋಟೋದೊಂದಿಗೆ ಅರ್ಜಿಯನ್ನು ಶ್ರೀವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಬ್ಯಾಂಕ್‌ನಲ್ಲಿ
ಇದೇ ತಿಂಗಳು ಜೂನ್ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ :
94816 60917, 63625 73270
ಸಂಪರ್ಕಿಸಿರಿ.

Get real time updates directly on you device, subscribe now.

Comments are closed.

error: Content is protected !!
%d bloggers like this: