ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅಧ್ಯಕ್ಷತೆಯಲ್ಲಿ ಸಭೆ

Get real time updates directly on you device, subscribe now.

 ): ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಮತ್ತು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಜೂನ್ 18ರಂದು ಕೆಕೆಆರ್‌ಡಿಬಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರ ಸಮ್ಮುಖದಲ್ಲಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ವಿವಿಧ ವಿಶ್ವ ವಿದ್ಯಾಲಯಗಳ ಕುಲ ಸಚಿವರು ಮತ್ತು ಜಿಲ್ಲಾ ನ್ಯಾಯಾಲಯ ಇಲಾಖೆ ಹಾಗೂ ಕೌಶಲ ಅಭಿವೃದ್ಧಿ ಕೇಂದ್ರ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೆಕೆಆರ್‌ಡಿಬಿ ಕಾಮಗಾರಿಗಳ ಪ್ರಗತಿಗೆ ಸಂಬAಧಿಸಿದAತೆ ಸುಧೀರ್ಘ ಎರಡು ಗಂಟೆಗು ಹೆಚ್ಚು ಕಾಲ ಚರ್ಚಿಸಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ನಾನಾ ಕಾಮಗಾರಿಗಳಿಗೆ ಅವಶ್ಯವಿರುವ ಭೂಸ್ವಾಧೀನಕ್ಕೆ ಸಂಬAಧಿಸಿದAತೆ ಕೆಲವು ಮಹತ್ವದ ನಿರ್ಣಯಗನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ, ಕೊಪ್ಪಳ ಜಿಲ್ಲೆಗೆ ಮಂಜೂರಾದ ಶಾಲೆಗಳು, ಕಾಲೇಜುಗಳು ಮತ್ತು ವಸತಿ ಶಾಲೆಗಳಿಗೆ ವಿವಿಧೆಡೆ ಜಮೀನು ಗುರುತಿಸಿ ನಿರ್ಣಯಿಸಲಾಯಿತು. ಈಗಾಗಲೇ ನಿವೇಶನ ಇರುವ ಕಡೆ ಅನುದಾನ ಬಿಡುಗಡೆ ಮಾಡಲು ಮತ್ತು ಈಗಾಗಲೇ ಬಿಡುಗಡೆಯಾದ ಅನುದಾನ ಬಳಕೆಗೆ ಸಂಬAಧಿಸಿದAತೆ ಟೆಂಡರ್ ಪ್ರಕ್ರಿಯೆ ನಡೆಸಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು. ವಿಶೇಷವಾಗಿ ಕೊಪ್ಪಳ ವಿಶ್ವ ವಿದ್ಯಾಲಯ ನಿರ್ಮಾಣ, ಜಿಲ್ಲಾ ನ್ಯಾಯಾಲಯ ನಿರ್ಮಾಣ, ಕೌಶಲ ಅಭಿವೃದ್ಧಿ ಕೇಂದ್ರ ನಿರ್ಮಾಣ ಸೇರಿದಂತೆ ಮಹತ್ವದ ಕಟ್ಟಡ ನಿರ್ಮಾಣಗಳಿಗೆ ಅವಶ್ಯವಿರುವಷ್ಟು ಜಮೀನು ನೀಡುವುದರ ಬಗ್ಗೆ ಸಹ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಲಾಯಿತು. ಕುಕನೂರ, ಕಾರಟಗಿ ಮತ್ತು ಕನಕಗಿರಿಯಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣದ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಲಾಯಿತು.
ಈ ವೇಳೆ ಮಾತನಾಡಿದ ರಾಯರೆಡ್ಡಿ ಅವರು, ಅನುದಾನ ಬಿಡುಗಡೆಯಾಗಿದೆ ಆದರೆ ಕಾಮಗಾರಿಯನ್ನು ಆರಂಭಿಸಲು ಜಮೀನು ಸಿಗುತ್ತಿಲ್ಲ ಎಂದು ಬಹುತೇಕ ಇಲಾಖೆಗಳ ಅಧಿಕಾರಿಗಳು ಹೇಳುತ್ತಾರೆ. ಜಮೀನು ಖರೀದಿ ಮಾಡಲು ಯಾವುದೇ ರೀತಿಯ ಹಣಕಾಸಿನ ಕೊರತೆ ಇಲ್ಲ. ಜಮೀನು ಸಿಗುತ್ತಿಲ್ಲ ಎಂದು ಅಧಿಕಾರಿಗಳು ಸುಮ್ಮನೆ ಕೂಡಬಾರದು. ಜಮೀನು ಖರೀದಿಗೆಂದೇ ಕೆಕೆಆರ್‌ಡಿಬಿನಲ್ಲಿ ಹಣ ಇದೆ. ಜಮೀನು ಖರೀದಿ ಪ್ರಕ್ರಿಯೆ ನಡೆಸಲು ಅಧಿಕಾರಿಗಳು ಮುಂದೆ ಬಂದಲ್ಲಿ ಕೆಕೆಆರ್‌ಡಿಬಿಯಿಂದ ಅನುದಾನ ಸಿಗುತ್ತದೆ ಎಂದು ತಿಳಿಸಿದರು.
ಯಲಬುರ್ಗಾ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಂಜೂರಾದ ಶಾಲೆಗಳಿಗೆ ಜಮೀನು ಲಭ್ಯತೆ, ಜಮೀನಿನ ಬೇಡಿಕೆಯ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಂದ ಮಾಹಿತಿ ಪಡೆದರು. ನಮ್ಮ ಜಿಲ್ಲೆಗೆ ಮಂಜೂರಾದ ಶಾಲೆಗಳಿಗೆ ಅನುದಾನ ನೀಡಲಾಗಿದೆ. ಆದ್ದರಿಂದ ಶಾಲೆಗಳಿಗೆ ನಿವೇಶನ ಲಭ್ಯವಿದ್ದ ಕಡೆಗಳಲ್ಲಿ ವಾರದೊಳಗೆ ಟೆಂಡರ್ ಪ್ರಕ್ರಿಯೆ ನಡೆಸಿ ಕಾಮಗಾರಿ ಆರಂಭಿಸಬೇಕು. ಡಿಡಿಪಿಐ ಮತ್ತು ತಹಸೀಲ್ದಾರರು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಈಗ ಹೊಸದಾಗಿ ಮೂರು ಮೊರಾರ್ಜಿ ಶಾಲೆಗಳು ಮಂಜೂರಾಗಿವೆ. ಅವುಗಳಿಗೆ ಜಮೀನು ಬೇಕಿದೆ ಎಂದು ಡಿಡಿಪಿಐ ಅವರು ಸಭೆಗೆ ತಿಳಿಸಿದರು. ಯಾವ ಯಾವ ಕಡೆಗಳಲ್ಲಿ ಜಮೀನಿನ ಅಗತ್ಯವಿದೆಯೋ ಎಂಬುದರ ಬಗ್ಗೆ ಕೂಡಲೇ ಪತ್ರ ಬರೆದು ಪ್ರಕ್ರಿಯೆ ನಡೆಸಲು ರಾಯರೆಡ್ಡಿ ಅವರು ಡಿಡಿಪಿಐ ಅವರಿಗೆ ನಿರ್ದೇಶನ ನೀಡಿದರು.
ಯಲಬುರ್ಗಾ ಕ್ಷೇತ್ರಕ್ಕೆ ಈಗಾಗಲೇ 15 ಬಸ್ ನಿಲ್ದಾಣಗಳು ಮಂಜೂರಾಗಿವೆ. ತಲಾ ಒಂದು ಬಸ್ ನಿಲ್ದಾಣಕ್ಕೆ ಈಗಾಗಲೇ 3 ಕೋಟಿ ರೂ. ನಿಗದಿಪಡಿಸಲಾಗಿದೆ. ಕೂಡಲೇ ಟೆಂಡರ್ ಪ್ರಕ್ರಿಯೆ ನಡೆಸಿ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ರಾಯರೆಡ್ಡಿ ಅವರು ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಂಜಿನಿಯರುಗಳಿಗೆ ನಿರ್ದೇಶನ ನೀಡಿದರು.
ಯಲಬುರ್ಗಾ ಕ್ಷೇತ್ರದ ವಿವಿಧೆಡೆಯ 9 ಕಡೆಗೆ ನಿರ್ಮಾಣವಾಗುವ ಬಸ್ ನಿಲ್ದಾಣಗಳಿಗೆ ಕೆಕೆಆರ್‌ಡಿಬಿಯಿಂದ ಅನುದಾನ ನಿಗದಿಪಡಿಸಲಾಗಿದೆ. ಮುರುಡಿ, ಹಿರೇಮ್ಯಾಗೇರಿ, ಗಾಣದಾಳು, ಮಂಡಲಗೇರಿ, ಹಿರೇಅರಳಿಹಳ್ಳಿ ಮತ್ತು ಬೆಣಕಲ್ ಗ್ರಾಮಗಳಲ್ಲಿ ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಅನುದಾನ ನಿಗದಿಪಡಿಸಲಾಗಿರುತ್ತದೆ ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ತಹಸೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು, ಅಭಿಯಂತರರು, ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ, ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು, ಎಂಜಿನಿಯರಿAಗ್ ಕಾಲೇಜಿನ ಪ್ರಾಚಾರ್ಯರು, ಜಿಲ್ಲಾ ನ್ಯಾಯಾಂಗ ಇಲಾಖೆಯ ಅಧಿಕಾರಿಗಳು, ಕೌಶಲ ಅಭಿವೃದ್ಧಿ ಕೇಂದ್ರದ ಉಪ ನಿರ್ದೇಶಕರು ಸೇರಿದಂತೆ ಇನ್ನೀತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!