ವಸತಿ ಶಾಲೆಗಳ ಪ್ರವೇಶ: ಜೂ.21 ರಂದು 2ನೇ ಸುತ್ತಿನ ಕೌನ್ಸೆಲಿಂಗ್

Get real time updates directly on you device, subscribe now.

 2024-25ನೇ ಸಾಲಿಗೆ ಜಿಲ್ಲೆಯ ಅಲ್ಪಿಸಂಖ್ಯಾತರ ಮೊರಾರ್ಜಿ ದೇಸಯಿ ವಸತಿ ಶಾಲೆ/ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜೂನ್ 21 ರಂದು 2ನೇ ಸುತ್ತಿನ ಕೌನ್ಸೆಲಿಂಗ್ ನಡೆಯಲಿದೆ.

ವಸತಿ ಶಾಲೆಗಳ ಪ್ರವೇಶಕ್ಕೆ 1ನೇ ಸುತ್ತಿನ ಕೌನ್ಸೆಲಿಂಗ್ ಮುಖಾಂತರ ಸೀಟು ಹಂಚಿಕೆ ಮಾಡಲಾಗಿದ್ದು, ಇನ್ನುಳಿದ ಸೀಟುಗಳಿಗೆ ಜೂನ್ 21 ರಂದು ಬೆಳಿಗ್ಗೆ 10.30 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ ಹೊಸಪೇಟೆ ರಸ್ತೆಯ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನದಲ್ಲಿ 2ನೇ ಸುತ್ತಿನ ಕೌನ್ಸೆಲಿಂಗ್ ಮುಖಾಂತರ ಸೀಟು ಹಂಚಿಕೆ ಮಾಡಲಾಗುವುದು.
ಕೌನ್ಸೆಲಿಂಗ್‌ಗೆ ಅರ್ಹತೆ ಹೊಂದಿದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಜಿಲ್ಲೆಯ ಎಲ್ಲ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಸ್ಥಳದಲ್ಲಿಯೇ ಸಂಬAಧಪಟ್ಟ ಶಾಲೆಗಳ ಪ್ರವೇಶ ದಾಖಲಾತಿ ಮಾಡಿಕೊಳ್ಳಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ಕೌನ್ಸೆಲಿಂಗ್‌ಗೆ ಬರುವಾಗ ಪ್ರವೇಶ ಪರೀಕ್ಷಾ ಗುರುತಿನ ಚೀಟಿ(ಹಾಲ್‌ಟಿಕೆಟ್), ಮೂಲ ವರ್ಗಾವಣೆ ಪ್ರಮಾಣ ಪತ್ರ(ಟಿ.ಸಿ.), ಮೂಲ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣ ಪತ್ರ, ವಿಶೇಷ ಮಕ್ಕಳ ಪ್ರಮಾಣ ಪತ್ರ (ಮಾಜಿ ಸೈನಿಕರು, ಸಫಾಯಿ ಕರ್ಮಚಾರಿ, ದೇವದಾಸಿ, ಅನಾಥ, ರೈತರ ಆತ್ಮಹತ್ಯೆ ಇತರೆ), 5ನೇ ತರಗತಿಯ ಮೂಲ ಅಂಕಪಟ್ಟಿ, ಆಧಾರ್ ಕಾರ್ಡ್ ಹಾಗೂ ಪಾಸ್‌ಪೋರ್ಟ್ ಅಳತೆಯ 04 ಭಾವಚಿತ್ರಗಳನ್ನು ಕಡ್ಡಾಯವಾಗಿ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಟಣಕನಕಲ್, ತಳಕಲ್, ಕುಕನೂರು, ಕುದರಿಮೋತಿ, ಹಿರೇಬೆಣಕಲ್-1&2 ಮತ್ತು ತಾಲ್ಲೂಕು ಮಾಹಿತಿ ಕೇಂದ್ರ ಕೊಪ್ಪಳ, ಕುಷ್ಟಗಿ, ಗಂಗಾವತಿ ಮತ್ತು ಯಲಬುರ್ಗಾ ಹಾಗೂ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಹೊಸಪೇಟೆ ರಸ್ತೆ ಕೊಪ್ಪಳ-583231 ದೂರವಾಣಿ ಸಂಖ್ಯೆ:-08539-225070 ಈ ವಿಳಾಸಕ್ಕೆ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: