ಅಂಚೆ ವಿಮೆ ಉತ್ಪನ್ನಗಳ ಮಾರಾಟ: ಪ್ರತಿನಿಧಿಗಳ ನಿಯುಕ್ತಿಗೆ ನೇರ ಸಂದರ್ಶನ
ಅಂಚೆ ಅಧೀಕ್ಷಕರು ಕೊಪ್ಪಳ ವಿಭಾಗ, ಕೊಪ್ಪಳ ಇವರು ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾಪಿಸಿದ್ದು, ಅರ್ಹ ಅಭ್ಯರ್ಥಿಗಳಿಗೆ ಜುಲೈ 08 ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಅರ್ಹತಾ ನಿಯಮಗಳು: ಅಭ್ಯರ್ಥಿಗಳು ಹತ್ತನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ 18 ವರ್ಷ ಮೇಲ್ಪಟ್ಟಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಸಲಹೆಗಾರರು ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆAದು ಕಂಡುಬAದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು ರೂ. 5000 ಗಳನ್ನು ರಾಷ್ಟಿçÃಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಅಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದು ಹಾಗೂ ಯಾವುದೇ ನಿಗದಿತ ವೇತನ ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ/ ಸಂಸ್ಥೆ ಸಂಘಗಳ ಏಜೆಂಟ್ ಆಗಿರಬಾರದು.
ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಜುಲೈ 08 ರಂದು ಬೆಳಿಗ್ಗೆ 10 ಗಂಟೆಗೆ ಅಂಚೆ ಅಧೀಕ್ಷಕರ ಕಾರ್ಯಾಲಯ, ಕೊಪ್ಪಳದಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.