ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೂತನವಾಗಿ 150 ಹಾಸ್ಟೆಲ್ ಮಂಜೂರು: ಎಸ್.ಎಫ್. ಐ ಸಂಘಟನೆಯ ಹೋರಾಟಕ್ಕೆ ಸಂದ ಜಯ
*
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಾವಿರಾರು ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗವುದನ್ನು ತಪ್ಪಿಸಲು ರಾಜ್ಯ ಸರ್ಕಾರ ನೂತನವಾಗಿ 150 ಹಾಸ್ಟೆಲ್ ಮಂಜೂರು ಮಾಡಿರವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಕರ್ನಾಟಕ ರಾಜ್ಯ ಸಮಿತಿಯು ಸ್ವಾಗತಿಸುತ್ತದೆ ಇದು ನಮ್ಮ ಹೋರಾಟಕ್ಕೆ ದೊರೆತ ಜಯ ಎಂದು ಸಂಘಟನೆಯ ರಾಜ್ಯ ಅಧ್ಯಕ್ಷ ಅಮರೇಶ ಕಡಗದ ಪತ್ರಿಕೆ ಹೇಳಿಕೆಯಲ್ಲಿ ತಿಳಿಸಿದ್ದಾರೆ
ಅವರು ಪತ್ರಿಕೆ ಹೇಳಿಕೆ ಬಿಡುಗಡೆ ಮಾಡಿದ್ದು ಹಿಂದುಳಿದ ಸಮುದಾಯಕ್ಕೆ ಸೇರಿದ ಹತ್ತಾರು ಸಾವಿರಾರು ವಿದ್ಯಾರ್ಥಿಗಳು ಪ್ರಮುಖವಾಗಿ ತಮ್ಮ ಉತ್ತಮ ಗುಣಮಟ್ಟದ ಹಾಗೂ ಉನ್ನತ ಶಿಕ್ಷಣಕ್ಕಾಗಿ ವಿವಿಧ ಗ್ರಾಮಗಳಿಂದ ನಗರ ಪ್ರದೇಶಕ್ಕೆ ಶಿಕ್ಷಣ ಮುಂದುವರಿಸಲು ಬರವು ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗವುದನ್ನು ಅರಿತುಕೊಂಡ ನಮ್ಮ ಸಂಘಟನೆಯು ಕಳೆದ ಒಂದು ವರ್ಷದಿಂದ ಹಾಸ್ಟೆಲ್ ಗಾಗಿ ಸಾವಿರಾರು ವಿದ್ಯಾರ್ಥಿಗಳ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲಾಗಳಲ್ಲಿ ನಮ್ಮ ಸಂಘಟನೆಯು ಪ್ರತಿಭಟನೆ ನಡೆಸಿದೆ ಜೊತೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರನ್ನು ನಮ್ಮ ರಾಜ್ಯ ನಿಯೋಗ ಬೆಂಗಳೂರಿನಲ್ಲಿ ಮತ್ತು ಕಾರಟಗಿಯಲ್ಲಿ ಭೇಟಿ ಮಾಡಿ ನೂತನ ಹಾಸ್ಟೆಲ್ ಮಂಜೂರು ಮಾಡಲು ಆಗ್ರಹಿಸಿ ಮನವಿ ಸಲ್ಲಿಸಲಾಗಿತ್ತು ಮತ್ತು ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮದಲ್ಲಿ ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಮ್ಮ ಸಂಘಟನೆಯು ಮತ್ತೆ ಮುಖ್ಯಮಂತ್ರಿಗಳಿಗೆ ನೂತನ ಹಾಸ್ಟೆಲ್ ಮಂಜೂರು ಮಾಡಲು ಮನವಿ ಮಾಡಿಕೊಳ್ಳಲಾಗಿತ್ತು ಕಳೆದ ಒಂದು ವರ್ಷದಿಂದ ನಿರಂತರ ನಮ್ಮ ಸಂಘಟನೆಯ ಹೋರಾಟದ ಪರಿಣಾಮವಾಗಿ ರಾಜ್ಯ ಸರ್ಕಾರ ಈ ಶೈಕ್ಷಣಿಕ ವರ್ಷದಲ್ಲಿ ನೂತನವಾಗಿ 100 ಸಂಖ್ಯೆ ಬಲವುಳ್ಳ ಒಟ್ಟು 150 ಹಾಸ್ಟೆಲ್ ಗಳನ್ನು ಮಂಜೂರು ಮಾಡಿರುತ್ತದೆ. ಇದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಕರ್ನಾಟಕ ರಾಜ್ಯ ಸಮಿತಿ ಸ್ವಾಗತ ಮಾಡುತ್ತದೆ. ಅದೇ ರೀತಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್ ಗಳು ವಸತಿ ಶಾಲೆಗಳನ್ನು ಮಂಜೂರು ಮಾಡಬೇಕು, ಹಾಸ್ಟೆಲ್ ಮಂಜೂರು ಮಾಡಲು ಕಾರಣರಾದ ರಾಜ್ಯದ ಮುಖ್ಯಮಂತ್ರಿಗಳಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಿಗೆ, ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಅಮರೇಶ ಕಡಗದ, ಗ್ಯಾನೇಶ ಕಡಗದ, ಶಿವಕುಮಾರ, ಬಾಲಜಿ, ವಿರೇಶ, ಹನುಮೇಶ, ಮಂಜುನಾಥ ಇತರರು ಪತ್ರಿಕೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Comments are closed.