ಮಹಿಳೆಯರಿಗೆ ಯೋಗಾಭ್ಯಾಸ ಅಗತ್ಯ: ದತ್ತಾತ್ರೇಯ

Get real time updates directly on you device, subscribe now.

//ಮಹಿಳಾ ಸಬಲೀಕರಣಕ್ಕಾಗಿ ಯೋಗ//

*ಮಹಿಳೆಯರಿಗೆ ಯೋಗಾಭ್ಯಾಸ ಅಗತ್ಯ: ದತ್ತಾತ್ರೇ*

ಕೊಪ್ಪಳ: ಇಂದು ಎಲ್ಲರೂ ಒತ್ತಡದಲ್ಲಿ ಬದುಕು ಸಾಗಿಸುತ್ತಿದ್ದೇವೆ. ಅದರಲ್ಲೂ ಮಹಿಳೆಯರು ಸಾಕಷ್ಟು ಒತ್ತಡದಲ್ಲೇ ಹಲವು ಕೆಲಸಗಳನ್ನು ನಿಭಾಯಿಸುತ್ತಾರೆ. ಒತ್ತಡಮುಕ್ತ ಬದುಕಿಗಾಗಿ ಮಹಿಳೆಯರಿಗೆ ಯೋಗಾಭ್ಯಾಸ ಅಗತ್ಯ ಎಂದು ಭಾಗ್ಯನಗರದ ಶ್ರೀ ಶಾರದಾಂಬ ಪಬ್ಲಿಕ್ ಸ್ಕೂಲ್‍ನ ಪ್ರಾಚಾರ್ಯ ದತ್ತಾತ್ರೇಯ ಆರ್.ಸಾಗರ ಹೇಳಿದರು.

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಸಬಲೀಕರಣಕ್ಕಾಗಿ ಯೋಗ ಎನ್ನುವ ಧ್ಯೇಯದೊಂದಿಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಇಂದಿನ ಒತ್ತಡದ ಬದುಕಿನಲ್ಲಿ ಯೋಗಾಭ್ಯಾಸದ ಅವಶ್ಯಕತೆಯನ್ನು ಮನದಟ್ಟು ಮಾಡುತ್ತ ಪೂರಕ ಪ್ರಾತ್ಯಾಕ್ಷಿಕೆಯನ್ನು ನೀಡಿದರು. ವಿಶೇಷವಾಗಿ ಹೆಣ್ಣುಮಕ್ಕಳ ಋತುಸ್ರಾವ ಸಂದರ್ಭದಲ್ಲಿ ಎದುರಿಸುವ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುವ ಆಸನಗಳನ್ನು ಹಾಗೂ ಪ್ರಾಣಾಯಮಗಳನ್ನು ತಿಳಿಸುವ ಮೂಲಕ ಯೋಗವು ಕೂಡ ಮಹಿಳೆಯರ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ರಾಷ್ಟ್ರೀಯ ಸೇವಾ ಯೋಜನೆಯ ವಿಶ್ವವಿದ್ಯಾಲಯ ಘಟಕದ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ಗಾಯತ್ರಿ ಭಾವಿಕಟ್ಟಿ ಪ್ರಾಸ್ತಾವಿಕ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವ-ಆರ್ಥಿಕ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ಡಿ.ಹೆಚ್.ನಾಯ್ಕ ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ದಿನನಿತ್ಯ ಯೋಗಾಭ್ಯಾಸ ಅಳವಡಿಸಿಕೊಳ್ಳುವದರ ಮಹತ್ವ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ತಿಮ್ಮಾರೆಡ್ಡಿ ಮೇಟಿ ಮಾತನಾಡಿ, ಜೂನ್ 21ರ ದಿನದ ಮಹತ್ವವನ್ನು ತಿಳಿಸುತ್ತ ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ಸಾಮಾಜಿಕ ಸೇವೆಯ ಕಾರ್ಯದಲ್ಲಿ ದೇಹ ಮತ್ತು ಮನಸ್ಸು ಸಕ್ರೀಯವಾಗಿ ಪಾಲ್ಗೊಳ್ಳಲು ಯೋಗ ಅಭ್ಯಾಸ ಬಹಳ ಪ್ರಧಾನ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ಕಾಲೇಜಿನ ಎಲ್ಲಾ ವಿಭಾಗದ ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿ, ಕಾಲೇಜಿನ ಒಟ್ಟು ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮದ ಪ್ರಯೋಜನ ಪಡೆದರು.

Get real time updates directly on you device, subscribe now.

Comments are closed.

error: Content is protected !!