ಆಡಳಿತಾಧಿಕಾರಿಗಳ ಅಧ್ಯಕ್ಷತೆ : ಕೊಪ್ಪಳ ತಾ.ಪಂ ಸಾಮಾನ್ಯ ಸಭೆ
ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಕೊಪ್ಪಳ ತಾ.ಪಂ ಸಾಮಾನ್ಯ ಸಭ
ಕೊಪ್ಪಳ:-2024-25ನೇ ಸಾಲಿನ ಕೊಪ್ಪಳ ತಾಲೂಕ ಪಂಚಾಯತಿ ಸಾಮಾನ್ಯಸಭೆಯು ತಾಲೂಕ ಪಂಚಾಯತಿಯ ಆಡಳಿತಾಧಿಕಾರಿಗಳು ಮತ್ತು ಉಪಕಾರ್ಯದರ್ಶಿಗಳಾದ .ಮಲ್ಲಿಕಾರ್ಜುನ ತೊದಲಬಾಗಿ ರವರ ಅಧ್ಯಕ್ಷತೆಯಲ್ಲಿ ಜರುಗಿತು.
ವಿವಿಧ ಇಲಾಖಾ ತಾಲೂಕ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿಯನ್ನು ಸಭೆಯಲ್ಲಿ ಮಂಡಿಸಿದರು. ನಂತರ ಗ್ರಾಮ ಪಂಚಾಯತಿಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಸಭೆಯಲ್ಲಿ ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ತಹಶೀಲ್ದಾರ ವಿಠ್ಥಲ್ ಚೌಗಲಾ, ತಾಲೂಕ ಮಟ್ಟದ ಅಧಿಕಾರಿಗಳು, ಪಂಚಾಯ್ತ ರಾಜ್ ಸಹಾಯಕ ನಿರ್ದೇಶಕ ಮಹೇಶ್, ಸಹಾಯಕ ಲೆಕ್ಕಾಧಿಕಾರಿ ರವಿಕುಮಾರ, ನರೇಗಾ ಸಹಾಯಕ ನಿರ್ದೇಶಕ ಯಂಕಪ್ಪ, ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನಮಂತಪ್ಪ, ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಹಾಜರಿದ್ದರು.
Comments are closed.