ಜಿಲ್ಲಾ ಪಂಚಾಯತ್ ಲಿಂಕ್ ಡಾಕ್ಯೂಮೆಂಟ್: ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

Get real time updates directly on you device, subscribe now.

*ಜಿಲ್ಲಾ ಪಂಚಾಯತ್ ಲಿಂಕ್ ಡಾಕ್ಯೂಮೆಂಟ್: ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಜೂ.24ಕ್ಕೆ*
ಕೊಪ್ಪಳ, : ಜಿಲ್ಲಾ ಪಂಚಾಯತ್ ಲಿಂಕ್ ಡಾಕ್ಯೂಮೆಂಟ್ ಅಡಿಯಲ್ಲಿ ಬರುವ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜೂನ್ 24ರಂದು ಮಧ್ಯಾಹ್ನ 3ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
      ಬೆಂಗಳೂರು ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತಿಯ ಆಡಳಿತಾಧಿಕಾರಿಗಳಾದ ಕೆ.ಪಿ ಮೋಹನ್ ರಾಜ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
      2024-25ನೇ ಸಾಲಿನ ಲಿಂಕ್ ಡಾಕ್ಯೂಮೆಂಟ್ ಕ್ರಿಯಾ ಯೋಜನೆ ಅನುಮೋದನೆ, 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಹಾಗೂ 2024-25ನೇ ಸಾಲಿನ ಮೇ ಅಂತ್ಯದವರೆಗಿನ ಎಂಪಿಕ್ ಪ್ರಗತಿ ಪರಿಶೀಲನೆ ಹಾಗೂ ಇತರೆ ವಿಷಯಗಳು ಕುರಿತು ಚರ್ಚೆ ನಡೆಯಲಿದ್ದು, ಎಲ್ಲಾ ಅಗತ್ಯ ಮಾಹಿತಿಯೊಂದಿಗೆ ಇಲಾಖಾ ಅಧಿಕಾರಿಗಳು ಮತ್ತು ಅನುಷ್ಟಾನಾಧಿಕಾರಿಗಳು ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಜಿ.ಪಂ ಮುಖ್ಯ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಜೂ.24ರಂದು ಜಿಲ್ಲಾ ಮಟ್ಟದ ಉಪಸಮಿತಿಗಳ ಪ್ರಗತಿ ಪರಿಶೀಲನೆ ಸಭೆ*
—-
ಕೊಪ್ಪಳ, ಜೂನ್ 23 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಮಟ್ಟದ ಉಪಸಮಿತಿಗಳ ಪ್ರಗತಿ ಪರಿಶೀಲನೆ ಸಭೆಯನ್ನು 24ರಂದು ಬೆಳಿಗ್ಗೆ 10 ರಿಂದ 01.30 ಗಂಟೆಯ ವರೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
      ಬೆಂಗಳೂರು ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತಿಯ ಆಡಳಿತಾಧಿಕಾರಿಗಳಾದ ಕೆ.ಪಿ ಮೋಹನ್ ರಾಜ್ ಅವರು ಸಭೆಯ ಅಧ್ಯಕ್ಷತೆ ವಹಿಸಿ, ಬೆಳಗ್ಗೆ 10 ರಿಂದ 12 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಕುಡಿಯುವ ನೀರು ಸರಬರಾಜು ಸಮಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆಯುಷ್ ಇಲಾಖೆಗಳ ಜಿಲ್ಲಾ ಆರೋಗ್ಯ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನೆ ಮತ್ತು ಮಧ್ಯಾಹ್ನ 12 ರಿಂದ 01.30 ರವರೆಗೆ ಜಿಲ್ಲಾ ಮಟ್ಟದ ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಮಿತಿ ಮತ್ತು ಕೊಪ್ಪಳ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗಾಗಿ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸೌಲಭ್ಯ ಅಭಿವೃದ್ಧಿ ಸಮಿತಿಯ ಸಭೆ ನಡೆಸಲಿದ್ದಾರೆ.
ಈ ಸಭೆಗೆ ಕೊಪ್ಪಳ ಜಿಲ್ಲೆಯ ಎಲ್ಲಾ ಉಪಸಮಿತಿಯ ಸದಸ್ಯರುಗಳು ಸಭೆಯ ವೇಳಾಪಟ್ಟಿಯಂತೆ ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಾಗುವಂತೆ ಜಿ.ಪಂ ಮುಖ್ಯ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
====

Get real time updates directly on you device, subscribe now.

Comments are closed.

error: Content is protected !!