ನೀಟ್ ಪರೀಕ್ಷೆಯಲ್ಲಿ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್.ಎಸ್.ಯು.ಐ ಆಗ್ರಹ
ಕೊಪ್ಪಳ: ನೀಟ್ ಪರೀಕ್ಷೆಯಲ್ಲಿ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್.ಎಸ್.ಯು.ಐ ಆಗ್ರಹಿಸಿ ಜಿಲ್ಲಾ ಘಟಕ ಕೊಪ್ಪಳ ನೇತೃತ್ವದಲ್ಲಿ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡಲಾಯಿತು.
ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು ಭಾರಿ ಅಕ್ರಮ ನಡೆದಿರುವ ಸಾಧ್ಯತೆ ಮೇಲ್ನೋಟಕ್ಕೆ ಕಾಣಿಸುತ್ತದೆ, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಗೆ ನಡೆಸಬೇಕು ಎಂಬುದು ದೇಶಾದ್ಯಂತ ಇರುವ ವಿದ್ಯಾರ್ಥಿಗಳ ಅಗ್ರಹ.
ನೀಟ್ ಫಲಿತಾಂಶ ವಿವಾದವಾಗಲು ಅನೇಕ ಅಂಶಗಳು ಕಾರಣವಾಗಿದ್ದು, ಒಟ್ಟು ೬೭ ವಿದ್ಯಾರ್ಥಿಗಳು ಮೊದಲ ?ಯಾಂಕ್ ಬಂದಿರುವುದು ಹಾಗೂ ಒಂದೇ ಪರೀಕ್ಷಾ ಕೇಂದ್ರದ ೮ ವಿದ್ಯಾರ್ಥಿಗಳು ಪ್ರಥಮ ?ಯಾಂಕ್ ಮಾಡಿರುವುದು ನೀಟ್ ಅಕ್ರಮ ನಡೆದಿರುವುದಕ್ಕೆ ಸಾಕ್ಷಿಯಂತಿದೆ. ?ಯಾಂಕ್ ಬಂದಿರುವವರಲ್ಲಿ ಆರು ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರದವರಾಗಿರುವುದು ಇನ್ನ? ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಶ್ನೆ ಪತ್ರಿಕೆ ಸೋರಿಕೆ. ನೀಟ್ ಪರೀಕ್ಷೆ ಫಲಿತಾಂಶ ನಂತರ ದೇಶದ ಕೆಲವೆಡೆ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದು, ಯುವ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಿದೆ.
ಇದಕ್ಕೆ ಕೇಂದ್ರ ಬಿಜೆಪಿ ಸರ್ಕಾರ ನೇರ ಕಾರಣವಾಗಿದ್ದು ವೈದ್ಯಕೀಯ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಆಡುತ್ತಿದೆ ಕೂಡಲೇ ಅಕ್ರಮ ವೆಸಗಿದವರ ಮೇಲೆ ಕ್ರಮ ಜರುಗಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕು ಇಲ್ಲವಾದಲ್ಲಿ ಜಿಲ್ಲಾ ಎನ್.ಎಸ್.ಯು.ಐ ಸಮಿತಿ ವತಿಯಿಂದ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಕೊಪ್ಪಳ ಜಿಲ್ಲಾ ಎನ್.ಎಸ್.ಯು.ಐ ಘಟಕ ಜಿಲ್ಲಾಧಿಕಾರಿಗಳ ಮುಖಾಂತರ ರಾ?ಪತಿಯವರಿಗೆ ಮನವಿ ಸಲ್ಲಿಸಲಾಯಿತು, ಅದಕ್ಕೂ ಮೊದಲು ಅಶೋಕ ವೃತ್ತದಲ್ಲಿ ಘೋ?ಣೆ ಕೂಗಿ ಕೇಂದ್ರದ ಶಿಕ್ಷಣ ಮಂತ್ರಿ ರಾಜೀನಾಮೆಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎನ್.ಎಸ್.ಯು.ಐ ಜಿಲ್ಲಾ ಅದ್ಯಕ್ಷರಾದ ಶಿವಕುಮಾರ್ ಕಾರಟಗಿ, ಮಾಜಿ ಎನ್.ಎಸ್.ಯು.ಐ ಜಿಲ್ಲಾ ಅಧ್ಯಕ್ಷರಾದ ಮಂಜುನಾಥ ಜಿ. ಗೊಂಡಬಾಳ, ತಾಲೂಕು ಅಧ್ಯಕ್ಷರಾದ ಹನುಮೇಶ ಬೆಣ್ಣಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಭೋವಿ, ಕಾರ್ಯಕರ್ತರಾದ ಮರಿಯಪ್ಪ, ಶಿವು, ಶಂಕರ, ದೇವರಾಜ ಅನೇಕರಿದ್ದರು.
Comments are closed.