ಕ್ರೀಡಾ ಕ್ಷೇತ್ರಕ್ಕೆ ತಮ್ಮ ಕೊಡುಗೆಯನ್ನು ನೀಡಿದ ಜಿಲ್ಲೆಯ ಕ್ರೀಡಾಪಟುಗಳ ವಿವರ ನೋಂದಾಯಿಸಲು ಕ್ರೀಡಾಪಟುಗಳಿಗೆ ಸೂಚನೆ
ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ, ರಾಷ್ಟç ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಸಾಧನೆಗೈದು ಕ್ರೀಡಾ ಕ್ಷೇತ್ರಕ್ಕೆ ತಮ್ಮ ಕೊಡುಗೆಯನ್ನು ನೀಡಿದ ಜಿಲ್ಲೆಯ ಕ್ರೀಡಾಪಟುಗಳ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿರುವುರಿಂದ, ಜಿಲ್ಲೆಯ ಕ್ರೀಡಾಪಟುಗಳು ತಮ್ಮ ವಿವರ ನೋಂದಾಯಿಸಲು ಸೂಚಿಸಿದೆ.
ಆದ್ದರಿಂದ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕ್ರೀಡೆಗಳಲ್ಲಿ ಕ್ರೀಡಾ ಸಾಧನೆಗೈದ ರಾಜ್ಯ, ರಾಷ್ಟç ಮತ್ತು ಅಂತರರಾಷ್ಟçಮಟ್ಟದ ಕ್ರೀಡಾಪಟುಗಳು ಅಗತ್ಯ ದಾಖಲೆಗಳೊಂದಿಗೆ ಇಲಾಖೆಯ ನಿಗದಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ನೋಂದಾಯಿಸಲು ವಿನಂತಿಸಲಾಗಿದೆ. ಹಾಗೂ ವಾಟ್ಸಾö್ಯಪ್ ಕ್ಯೂಆರ್ ಕೋಡ್ ನೀಡಲಾಗಿದ್ದು, ಸ್ಕಾö್ಯನ್ ಮಾಡಿ ವಿವರಗಳನ್ನು ಭರ್ತಿ ಮಾಡಿ ಇಲಾಖೆಯ ಕಾರ್ಯಕ್ರಮಗಳ ಹಾಗೂ ಕ್ರೀಡಾಕೂಟಗಳ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಗದಗ ರಸ್ತೆ, ಕೊಪ್ಪಳ ಕಛೇರಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.