ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

Get real time updates directly on you device, subscribe now.

ಕೊಪ್ಪಳ ): ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು 2023ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ನಂತರ ಸೆಪ್ಟೆಂಬರ್ 15ರ ವರೆಗೆ ದಂಡ ಶುಲ್ಕ ರೂ.50 ಅನ್ನು ಹೆಚ್ಚುವರಿಯಾಗಿ ನೀಡಿಯೂ ಅರ್ಜಿ ಸಲ್ಲಿಸಬಹುದು.
ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ರೂ. 25 ಶುಲ್ಕ ಪಾವತಿಸಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ಪಡೆಯಬಹುದು ಅಥವಾ ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ 30 ರೂ. ಮನಿ ಆರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು. ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಆನ್‌ಲೈನ್ ಮೂಲಕ ಅರ್ಜಿ ಪಡೆದವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ 25 ರೂ.ಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-560018 ದೂರವಾಣಿ ಸಂಖ್ಯೆ 080-26612991, 22423867 ಮತ್ತು 22423867, 26623584 ಇವರನ್ನು ಸಂಪರ್ಕಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ.ಪದ್ಮನಿ ನಾಗರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!