ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ರಾಜಶೇಖರ್ ಹಿಟ್ನಾಳ್

Get real time updates directly on you device, subscribe now.

ನವದೆಹಲಿ : ನೂತನ ಸಂಸದರಾಗಿ ಆಯ್ಕೆಯಾಗಿರುವ ರಾಜಶೇಖರ್ ಹಿಟ್ನಾಳ್ ಲೋಕಸಭೆಯಲ್ಲಿ ಇಂದು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇದು ನನ್ನ ರಾಜಕೀಯ ಜೀವನದ ಅತ್ಯಂತ ಹೆಮ್ಮೆಯ ಹಾಗೂ ಐತಿಹಾಸಿಕ ಕ್ಷಣವಾಗಿದೆ. ನೂತನ ಸಂಸತ್‌ ಭವನ ಸೆಂಟ್ರಲ್ ವಿಸ್ಟಾದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರಿಂದ ಕೊಪ್ಪಳ ಲೋಕಸಭಾ ಕ್ಷೇತ್ರದ ಜನರ ಪ್ರತಿನಿಧಿಯಾಗಿ ಇಂದು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದೆ‌.

ಭಾರತದ ಪ್ರಜಾಪ್ರಭುತ್ವದ ಸನ್ನಿಧಿಯಲ್ಲಿ ಕರ್ನಾಟಕ ಹಾಗೂ ಕನ್ನಡದ ಧ್ವನಿಯಾಗಲು ಸಹಕರಿಸಿದ ಕೊಪ್ಪಳ ಲೋಕಸಭಾ ಕ್ಷೇತ್ರದ ಮತದಾರ ಪ್ರಭುಗಳಿಗೆ ನಾನು ಸದಾ ಚಿರ ಋಣಿಯಾಗಿರುವೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಶ್ರಮಿಸುವೆ‌ ಎಂದು ಕೆ. ರಾಜಶೇಖರ ಹಿಟ್ನಾಳ, ಹೇಳಿದ್ದಾರೆ.

Get real time updates directly on you device, subscribe now.

Comments are closed.

error: Content is protected !!