ಶೀಲಾ ಹಾಲ್ಕುರಿಕೆ, ಶರಣು ಶೆಟ್ಟರ್ ಹಾಗೂ ಲಕ್ಷ್ಮಣ ಪೀರಗಾರ್‌ರಿಗೆ ಸಿಜಿಕೆ ರಂಗ ಪುರಸ್ಕಾರ
ಕೊಪ್ಪಳ : ಕರ್ನಾಟಕ ಬೀದಿ ನಾಟಕ ಅಕಾಡೆಮಿ ಬೆಂಗಳೂರು, ಕನ್ನಡನೆಟ್ ಡಾಟ್ ಕಾಮ್, ಕವಿಸಮಯ ಹಾಗೂ ಬಹುತ್ವ ಬಳಗ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ ಸಿಜಿಕೆ ರಂಗ ಪುರಸ್ಕಾರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.
ಹಿರಿಯ ರಂಗಕರ್ಮಿ ಸಿಜಿಕೆ ಇವರ ನೆನಪಿನಲ್ಲಿ ಪ್ರತಿ ವರ್ಷ ಅವರ ಜನ್ಮದಿನದಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು ಇದರ ಅಂಗವಾಗಿ ರಂಗಪುರಸ್ಕಾರ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರಂಗಕರ್ಮಿಗಳ ಸೇವೆಯನ್ನು ಗುರುತಿಸಿ ಅವರಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಮೂರು ವರ್ಷಗಳ ಪ್ರಶಸ್ತಿಗಳಿಗೆ ಕೊಪ್ಪಳ ಜಿಲ್ಲೆಯ ಪ್ರತಿಭಾವಂತ ರಂಗ ಕರ್ಮಿಗಳು ನಟ ನಿರ್ದೇಶಕರಾದ ಶೀಲಾ ಹಾಲ್ಕುರಿಕೆ (೨೦೨೧) , ಶರಣು ಶೆಟ್ಟರ್ (೨೦೨೨) ಲಕ್ಷ್ಮಣ ಪೀರಗಾರ (೨೦೨೩) ಆಯ್ಕೆಯಾಗಿದ್ದಾರೆ.
ಇದೇ ದಿ. ೨೭ರಂದು ಗುರುವಾರ ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬೆಳಿಗ್ಗೆ ೧೧ ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು ಪ್ರಶಸ್ತಿಗಳನ್ನು ವಿತರಣೆ ಮಾಡಲಾಗುವುದು. ಕಾರ್ಯಕ್ರಮವನ್ನು ನಾಟಕ ಅಕಾಡೆಮಿ ಸದಸ್ಯ ಚಾಂದ್‌ಪಾಷಾ ಕಿಲ್ಲೆದಾರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಗತಿಪರ ಚಿಂತಕಿ ಶೈಲಜಾ ಹಿರೇಮಠ್ ಹಾಗೂ ಮುಖಂಡರಾದ ಕಾಟನ್ ಪಾಷಾ, ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಗೌಸ್ ಮುಲ್ಲಾ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಗಣಪತಿ ಲಮಾಣಿ ವಹಿಸಿಕೊಳ್ಳಲಿದ್ದಾರೆ, ಆಸಕ್ತರು ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಸಂಘಟಕರಾದ ಸಿರಾಜ್ ಬಿಸರಳ್ಳಿ, ಎಚ್ ವಿ ರಾಜಾ ಬಕ್ಷಿ ಪ್ರಕಟಣೆಯಲ್ಲಿ ಕೋರಿದ್ದಾರೆ.
Comments are closed.