ಕೆಂಪೇಗೌಡ ಜಯಂತಿ: ಶಾಲೆಗಳಲ್ಲಿ ಪ್ರಬಂಧ, ಭಾಷಣ ಸ್ಪರ್ಧೆ ಏರ್ಪಡಿಸಲು ಸೂಚನೆ 

Get real time updates directly on you device, subscribe now.

: ಕೆಂಪೇಗೌಡ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ. ಕಡಿ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ 2023-24ನೇ ಸಾಲಿನ ಜಯಂತಿಗಳ ಪಟ್ಟಿಯನ್ವಯ ಜೂನ್ 27ರಂದು ಶ್ರೀ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಬೇಕಾಗಿರುತ್ತದೆ. ಈ ಬಾರಿ ಶ್ರೀ ಕೆಂಪೇಗೌಡ ಜಯಂತಿ ಆಚರಣೆ ಮಾಡುವ ಸಲುವಾಗಿ ಪ್ರತಿ ತಾಲ್ಲೂಕಿಗೆ ರೂ.1 ಲಕ್ಷಗಳ ವಿಶೇಷ ಅನುದಾನ ಬಿಡುಗಡೆಯಾಗಿರುವುದರಿಂದ ಎಲ್ಲಾ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಈ ಜಯಂತಿಯನ್ನು ಆಚರಣೆ ಮಾಡಲು ಕ್ರಮವಹಿಸುತ್ತಾ ಹಾಗೂ ನಾಡಪ್ರಭು ಕೆಂಪೇಗೌಡರ ಕುರಿತು ಶಾಲೆಗಳಲ್ಲಿ ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಣೆಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
ತಹಶೀಲ್ದಾರರು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ತಾಲ್ಲೂಕಿನ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿಯೂ ಸಹ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುವಂತೆ ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!