ಅಲ್ಪಸಂಖ್ಯಾತರಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ: ಅರ್ಜಿ ಆಹ್ವಾನ
ಕೊಪ್ಪಳ ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್, ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ಕೊರ್ಸಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದ್ದು, ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್ kmdconline.karnataka.gov.in ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ಬಳಿಕ ವಿಧ್ಯಾರ್ಥಿಗಳಿಂದ ಮೂಲ ಇನ್‌ಡೆಂನಿಟಿ ಬಾಂಡ್ ನ್ನು ನಿಗಮದ ಜಿಲ್ಲಾ ಕಚೇರಿಗೆ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಪ್ಪಳ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08539-225008ಗೆ ಸಂಪರ್ಕಿಸಬಹುದು ಎಂದು ನಿಗದಮ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.