ಸಿಂಗನಾಳದಲ್ಲಿ ಶ್ರೀ ಗಾದಿಲಿಂಗೇಶ್ವರ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಡಿಗಲ್ಲು
: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸಿಂಗನಾಳ ಗ್ರಾಮದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಶ್ರೀ ಗಾದಿಲಿಂಗೇಶ್ವರ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಸಮಾರಂಭಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಜೂನ್ 25ರಂದು ಚಾಲನೆ ನೀಡಿದರು.
ಬಳಿಕ ಸಚಿವರು ಮಾತನಾಡಿ, ಆರ್ಥಿಕವಾಗಿ ದುರ್ಬಲರಾದವರಿಗೆ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಅನುಕೂಲವಾಗುತ್ತಿದೆ. ರಾಜ್ಯ ಸರ್ಕಾರವು ಜಾರಿಗೆ ತಂದ ಯೋಜನೆಗಳು ಜನತೆಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ ಬರಲು ಸಾಧ್ಯವಾಗಿದೆ. ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ ಕೀರ್ತಿ ನಮ್ಮ ಸರ್ಕಾರಕ್ಕೆ ಸಲ್ಲುತ್ತದೆ. ಸಿಂಗನಾಳ ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಶ್ರೀ ಗಾದಿಲಿಂಗೇಶ್ವರ ಸಮುದಾಯ ಭವನದಿಂದ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದ್ದು, ಈ ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದಕ್ಕೂ ಮೊದಲು ಸಚಿವರು ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿ ತಾಲ್ಲೂಕಿನ ಮರಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕೊಂದು ಕೊರತೆ ಆಲಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್, ಮುಖಂಡರಾದ ಶರಣೇಗೌಡ, ನಿರಲೂಟಿ ಸಿದ್ಧಪ್ಪ, ಬಸವರಾಜ್ ನಿರ್ಗಂಟಿ ಸೇರಿದಂತೆ ಮತ್ತಿತರರಿದ್ದರು.
Comments are closed.