ಬಾಲ್ಯವಿವಾಹ ಮುಕ್ತ ತಾಲ್ಲೂಕನ್ನಾಗಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ತಹಶೀಲ್ದಾರ ವಿಶ್ವನಾಥ ಮುರಡಿ
: ಬಾಲ್ಯವಿವಾಹ ಮುಕ್ತ ತಾಲ್ಲೂಕನ್ನಾಗಿಸಲು ತಾಲ್ಲೂಕಿನ ಎಲ್ಲಾ ಬಾಲ್ಯವಿವಾಹ ನಿಷೇದಾಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕನಕಗಿರಿ ತಹಶೀಲ್ದಾರ ವಿಶ್ವನಾಥ ಮುರಡಿ ಅವರು ಬಾಲ್ಯವಿವಾಹ ನಿಷೇದಾಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಲ್ಯವಿವಾಹ ಮುಕ್ತ ತಾಲೂಕನ್ನಾಗಿಸಲು ತಾಲೂಕಿನ ಎಲ್ಲಾ ಬಾಲ್ಯವಿವಾಹ ನಿಷೇದಾಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ತಾಲೂಕಿನ ಎಲ್ಲಾ ದೇವಾಲಯಗಳಲ್ಲಿ ಮುಖ್ಯವಾಗಿ ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ದೇವಸ್ಥಾನಗಳಲ್ಲಿ ಸಾರ್ವಜನಿಕರಿಗೆ ಕಾಣಿಸುವಂತೆ ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ ಎಂಬ ಶಾಶ್ವತ ಗೋಡೆ ಬರಹವನ್ನು ಬರೆಯಿಸಲು ದೇವಸ್ಥಾನಗಳ ಮುಖ್ಯಸ್ಥರುಗಳಿಗೆ ಸೂಚಿಸಬೇಕು. ಸಾಮೂಹಿಕ ವಿವಾಹ ಆಯೋಜಕರು ಕಡ್ಡಾಯವಾಗಿ ತಹಶೀಲ್ದಾರರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಸಾಮೂಹಿಕ ವಿವಾಹ ಆಯೋಜನೆಗೆ ಅನುಮತಿಯನ್ನು ಪಡೆದುಕೊಂಡ ನಂತರವೇ ಸಾಮೂಹಿಕ ವಿವಾಹಗಳನ್ನು ಆಯೋಜಿಸತಕ್ಕದ್ದು, ತಪ್ಪಿದಲ್ಲಿ, ಬಾಲ್ಯವಿವಾಹ ಜರುಗಿದ್ದು ಕಂಡುಬAದಲ್ಲಿ, ಸಾಮೂಹಿಕ ವಿವಾಹ ಆಯೋಜಕರು ಸೇರಿದಂತೆ ಸಂಬAಧಿಸಿದ ಎಲ್ಲರ ವಿರುದ್ಧವೂ ಪ್ರಕರಣವನ್ನು ದಾಖಲಿಸುವಂತೆ ಅಧಿಕಾರಿಗಳಿಗೆ ಮತ್ತು ಪೊಲೀಸ್‌ರಿಗೆ ಸೂಚಿಸಿದರು.
ಸರಕಾರದ ಎಲ್ಲಾ ಯೋಜನೆಗಳ ಫಲಾನುಭವಿಗಳಿಂದ “ನನ್ನ ಕುಟುಂಬದಲ್ಲಿ ಬಾಲ್ಯವಿವಾಹವನ್ನು ಮಾಡುವುದಿಲ್ಲ, ಬಾಲ್ಯವಿವಾಹಕ್ಕೆ ಅವಕಾಶ ನೀಡುವುದಿಲ್ಲ ಹಾಗೂ ಅಂತಹ ಬಾಲ್ಯವಿವಾಹದಲ್ಲಿ ಭಾಗಿಯಾಗುವುದಿಲ್ಲ, ತಪ್ಪಿದಲ್ಲಿ ನನಗೆ ನೀಡಿರುವ ಸರಕಾರದ ಸವಲತ್ತನ್ನು ಹಿಂಪಡೆಯಬಹುದಾಗಿದೆ” ಎಂಬ ಮುಚ್ಚಳಿಕೆ ಪತ್ರವನ್ನು ಪಡೆಯುವುದು ಕಡ್ಡಾಯವಾಗಿದ್ದು, ಈ ಕುರಿತು ಕ್ರಮವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ತಹಶೀಲ್ದಾರರು ಸೂಚಿಸಿದರು. ವಿವಾಹದ ಸಲುವಾಗಿ ಯಾರಾದರು ನಕಲಿ ಶಾಲಾ ದೃಢೀಕರಣ ಪತ್ರವನ್ನು ನೀಡಿದಲ್ಲಿ ಅಂತಹ ಶಾಲೆ ಹಾಗೂ ಮುಖ್ಯೋಪಾಧ್ಯಾಯರ ವಿರುದ್ಧ ಕಾನೂನು ರೀತ್ಯಾ ಸೂಕ್ತ ಕ್ರಮಗಳನ್ನು ಜರುಗಿಸಲು ಶಿಕ್ಷಣ ಇಲಾಖೆಗೆ ಸೂಚಿಸಿದರು. ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ “ಗ್ರಾಮ ಪಂಚಾಯತ್ ಮಕ್ಕಳ ಉದ್ದೇಶಿತ ಆಯ-ವ್ಯಯ ತಯಾರಿಸಿ” ಅನುಷ್ಠಾನಗೊಳಿಸುವುದು ಕಡ್ಡಾಯವಾಗಿದ್ದು, ಈ ಕುರಿತು ಕ್ರಮವಹಿಸುವಂತೆ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಕ್ಕಳ ಸ್ನೇಹಿ ವಾತಾವರಣ ಮತ್ತು ಮಕ್ಕಳ ಪರವಾದ ಪಂಚಾಯತ್‌ಗಳನ್ನಾಗಿಸಲು ಪ್ರತಿ ಗ್ರಾಮ ಪಂಚಾಯತ್‌ಗಳಲ್ಲಿ ಕನಿಷ್ಠ 03 ತಿಂಗಳಿಗೊಮ್ಮೆ “ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ”ಗಳ ಸಭೆಯನ್ನು ಕಡ್ಡಾಯವಾಗಿ ಆಯೋಜಿಸಿ ವರದಿಯನ್ನು ಜಿಲ್ಲಾ ಪಂಚಾಯತ್ ಮತ್ತು ಈ ಕಛೇರಿಗೆ ಸಲ್ಲಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳು, ಕನಕಗಿರಿರವರಿಗೆ ಸೂಚಿಸಿದರು.
ಕರ್ನಾಟಕ ರಾಜ್ಯ ಸರಕಾರವು ಅನುಷ್ಠಾನಗೊಳಿಸಿರುವ “ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 (ತಿದ್ದುಪಡಿ) -2023ರನ್ವಯ” ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಅನುಷ್ಠಾನಗೊಳಿಸಬೇಕಾಗಿರುತ್ತದೆ. ಈ ಸುರಕ್ಷತಾ ಕ್ರಮಗಳನ್ನು ತಾಲೂಕಿನ ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸಿದ ವರದಿಯನ್ನು ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಹಶೀಲ್ದಾರರು ಸೂಚಿಸಿದರು.
ಮಕ್ಕಳಿಗೆ ಪೊಲೀಸ್ ಇಲಾಖೆಯ ಭಯ ನಿವಾರಣೆಗಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಅದರಲ್ಲಿ “ತೆರೆದ ಮನೆ ಕಾರ್ಯಕ್ರಮ”ವು ಒಂದಾಗಿದೆ. ಪ್ರತಿ ಗುರುವಾರದಂದು “ತೆರೆದ ಮನೆ ಕಾರ್ಯಕ್ರಮ”ವನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಿ ವರದಿಯನ್ನು ಸಲ್ಲಿಸಿ ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ತಹಶೀಲ್ದಾರರು ಸೂಚಿಸಿದರು.
ಮಕ್ಕಳ ಭಿಕ್ಷಾಟನೆ ಮತ್ತು ಮಹಿಳಾ ಭಿಕ್ಷಾಟಣೆಯನ್ನು ತಡೆಗಟ್ಟಲು ಅನಿರೀಕ್ಷಿತ ದಾಳಿಗಳನ್ನು ಆಯೋಜಿಸುವುದು ಅನಿವಾರ್ಯವಾಗಿದ್ದು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ನಿಯಮಿತವಾಗಿ ಅನಿರೀಕ್ಷಿತ ದಾಳಿಗಳನ್ನು ಆಯೋಜಿಸಿ ವರದಿಯನ್ನು ಸಲ್ಲಿಸುವಂತೆ ತಹಶೀಲ್ದಾರರು ಸೂಚಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವಿರುಪಾಕ್ಷಿ ಅವರು ಮಾತನಾಡಿ, ಕೇಂದ್ರ ಸರಕಾರವು ಮಕ್ಕಳ ಸಂರಕ್ಷಣೆಗಾಗಿ “ಮಿಷನ್ ವಾತ್ಸಲ್ಯ ಯೋಜನೆ”ಯನ್ನು ಏಪ್ರಿಲ್-2022ರಿಂದ ಅನುಷ್ಠಾನಗೊಳಿಸಿದೆ. ಅದರನ್ವಯ ಪೋಷಣೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳ ಪೋಷಣೆಗಾಗಿ ಸರಕಾರಿ ಬಾಲಕರ ಬಾಲಮಂದಿರ ಮತ್ತು ಬಾಲಕಿಯರ ಬಾಲಮಂದಿರವನ್ನು ಹಾಗೂ ವಿಶೇಷ ದತ್ತು ಸೇವಾ ಕೇಂದ್ರವನ್ನು ಸಾಂಸ್ಥಿಕ ಸೇವೆಯಡಿಯಲ್ಲಿ ಸ್ಥಾಪಿಸಿದೆ. ಅಸಾಂಸ್ಥಿಕ ಸೇವೆಯಡಿಯಲ್ಲಿ ದತ್ತು ಕಾರ್ಯಕ್ರಮ, ಪೋಸ್ಟರ್ ಕೇರ್, ಪ್ರಾಯೋಜಕತ್ವ ಮತ್ತು ನಂತರದ ಸೇವೆಗಳು (ಉಪಕಾರ ಯೋಜನೆ)ಯನ್ನು ಅನುಷ್ಠಾನಗೊಳಿಸಿದ್ದು, ಈ ಮಿಷನ್ ವಾತ್ಸಲ್ಯ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಲು ಪಂಚಾಯತ್‌ಗಳ ಪಾತ್ರವು ಅತ್ಯಂತ ಮಹತ್ವದಾಗಿದ್ದು, ಈ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಮುಖ್ಯಾಧಿಕಾರಿಗಳು, ಪಟ್ಟಣ ಪಂಚಾಯತ್, ಕನಕಗಿರಿರವರಿಗೆ ಸೂಕ್ತ ನಿರ್ದೇಶನವನ್ನು ನೀಡುವಂತೆ ಕೋರಿದರು.
ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರವಿಕುಮಾರ ಪವಾರ, ಮಕ್ಕಳ ಸಹಾಯವಾಣಿ-1098ರ ಶರಣಪ್ಪ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯತ್, ಸ್ತಿçà ಶಕ್ತಿ ಒಕ್ಕೂಟದ ಪ್ರತಿನಿಧಿಗಳು ಮತ್ತು ಶಿಶು ಅಭಿವೃದ್ಧಿ ಯೋನಾಧಿಕಾರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
Comments are closed.