ಜಿಲ್ಲಾಧಿಕಾರಿಗಳಿಂದ ಕನಕಗಿರಿ ತಾಲ್ಲೂಕಿನ ವಿವಿಧ ಸ್ಥಳಗಳ ಭೇಟಿ

Get real time updates directly on you device, subscribe now.

ಜನ ಸ್ಪಂದನಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕನಕಗಿರಿ ತಾಲ್ಲೂಕಿನ ಪ್ರವಾಸದಲ್ಲಿದ್ದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಬುಧವಾರದಂದು ಕನಕಗಿರಿ ಪಟ್ಟಣ ಹಾಗೂ ಗ್ರಾಮೀಣ ಭಾಗದ ವಿವಿಧ ಸ್ಥಳಗಳಿಗೆ ಭೇಟಿ ಮಾಡಿದರು.
ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ಕನಕಗಿರಿ ಪಟ್ಟಣದಲ್ಲಿ ಕಾಯ್ದಿರಿಸಲಾದ ಜಮೀನಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮಿನಿ ವಿಧಾನಸೌಧ ನಿರ್ಮಾಣ ಕುರಿತಂತೆ ನೀಲಿನಕ್ಷೆ ಪರಿಶೀಲಿಸಿದರು.
ಬಳಿಕ ಜಿಲ್ಲಾಧಿಕಾರಿಗಳು ಕನಕಗಿರಿ ತಾಲ್ಲೂಕಿನ ಕಲಕೇರಾ ಗ್ರಾಮಕ್ಕೆ ತೆರಳಿ ಅಲ್ಲಿನ ಪ್ರಾಚೀನ ವಸ್ತು ಸಂಗ್ರಹಾಲಯ ಕಟ್ಟಡ ನಿರ್ಮಾಣಕ್ಕಾಗಿ ಕಾಯ್ದಿರಿಸಿದ ಜಮೀನು ಸ್ಥಳ ಪರಿಶೀಲಿಸಿದರು. ಇದೇ ವೇಳೆ ಜಿಲ್ಲಾಧಿಕಾರಿಗಳು ಕಲಕೇರಾ ಗ್ರಾಮದ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತೆರಳಿ ವಿದ್ಯಾಭ್ಯಾಸದ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಿ, ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳನ್ನು ಸಮರ್ಪವಾಗಿ ಕಲ್ಪಿಸುವಂತೆ ಶಿಕ್ಷಕರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಕನಕಗಿರಿ ತಹಶೀಲ್ದಾರರಾದ ವಿಶ್ವನಾಥ ಮುರಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!