ವಾಲ್ಮೀಕಿ ನಿಗಮ ಹಗರಣ : ಬಿಜೆಪಿ ಬೃಹತ್ ಪ್ರತಿಭಟನೆ
ಕೊಪ್ಪಳ : ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೊಪ್ಪಳದಲ್ಲಿಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಕೊಪ್ಪಳ ನಗರದ ಅಶೋಕ ಸರ್ಕಲ್ ನಿಂದ ಆರಂಭವಾದ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಟೈರ್ ಗೆ ಬೆಂಕಿ ಹಚ್ಚುವುದರ ಮೂಲಕ ಪ್ರತಿಭಟನಾಕಾರರು ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜನಾರ್ಧನ್ ರೆಡ್ಡಿ ಕಾಂಗ್ರೆಸ್ ಪಕ್ಷದ ವಿರುದ್ಧ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಮುಖ್ಯ ಗೇಟ್ ಬಳಿಯ ತಡೆದರು. ಇದರಿಂದಾಗಿ ಆಕ್ರೋಶಗೊಂಡ ಕಾರ್ಯಕರ್ತರು ಹಾಗೂ ಮುಖಂಡರು ಬ್ಯಾರಿಕೆಡನ್ನು ತಳ್ಳುವುದಕ್ಕೆ ಪ್ರಯತ್ನಿಸಿದರು ನಂತರ ಬ್ಯಾರಿಕೆಡ್ನ ಮೇಲೆ ನಿಂತು ಪ್ರತಿಭಟನೆ ನಡೆಸಿದ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಹಾಗೂ ಜನಾರ್ಧನ್ ರೆಡ್ಡಿ ಬ್ಯಾರಿ ಕೇಡನ್ನು ಹಾರುವ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಒಳಗಡೆ ಪ್ರವೇಶಿಸಿದರು. ಅವರ ಜೊತೆ ಸಾಕಷ್ಟು ಕಾರ್ಯಕರ್ತರು ಸಹ ಬ್ಯಾರಿಕೆಡನ್ನು ದಾಟಿಕೊಂಡು ಒಳಗೆ ಪ್ರವೇಶಿಸಿ ಧಿಕ್ಕಾರ ಕೂಗಿದರು. ಮುಚ್ಚಲಾಗಿದ್ದ ಜಿಲ್ಲಾಧಿಕಾರಿಗಳ ಕಚೇರಿಯ ಮುಖ್ಯ ದ್ವಾರದ ಬಾಗಿಲನ್ನು ಬಡಿಯುವ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದರು. ಕಚೇರಿಯ ಒಳಗಡೆ ಪ್ರವೇಶಿಸದಂತೆ ಅವರನ್ನು ಪೊಲೀಸರು ತಡೆಗಟ್ಟಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಆವರಣದೊಳಗೆ ನುಗ್ಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಕರೆದೊಯ್ದರು
ಈ ಸಂದರ್ಭದಲ್ಲಿ ಮುಖ್ಯ ಸಚೇತಕರಾಗಿರುವ ದೊಡ್ಡನಗೌಡ ಪಾಟೀಲ್ ಗಂಗಾವತಿ ಶಾಸಕ ಜನಾರ್ದನ್ ರೆಡ್ಡಿ, ಮಾಜಿ ಶಾಸಕ ಪರಣ್ಣ ಮುನವಳ್ಳಿ , ಬಸವರಾಜ್ ದಡೆಸುಗೂರು, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗಣ್ಣವರ್, ಮುಖಂಡರಾದ ಡಾ. ಬಸವರಾಜ್ ಕ್ಯಾವಟರ್, ಮಾಜಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ, ಯಮನೂರಪ್ಪ ಚೌಡಕಿ, ಗಣೇಶ್ ಹೊರತಟ್ನಾಳ್ ಮೌನೇಶ್ ದಡೇಸುಗೂರು , ಡಾ. ಕೆ ಜಿ ಕುಲಕರ್ಣಿ ರಾಘವೇಂದ್ರ ಪಾನಗಂಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Comments are closed.