ಪಿ.ಸಿ.&ಪಿ.ಎನ್.ಡಿ.ಟಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ
ಭ್ರೂಣ ಹತ್ಯೆ ಹಾಗೂ ಲಿಂಗ ಅಸಮಾನತೆ ತಡೆಯುವುದು ಕಾಯ್ದೆಯ ಮೂಲ ಉದ್ದೇಶ: ಡಿ.ಎಚ್.ಒ ಡಾ.ಲಿಂಗರಾಜು ಟಿ.
ಕೊಪ್ಪಳ, ಜೂನ್ 28 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಮತ್ತು ಲಿಂಗ ಅಸಮಾನತೆ ತಡೆಯುವುದು ಪಿ.ಸಿ. & ಪಿ.ಎನ್.ಡಿ.ಟಿ ಕಾಯ್ದೆಯ ಮೂಲ ಉದ್ದೇಶವಾಗಿದ್ದು, ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ. ಅವರು ಹೇಳಿದರು.
ಶುಕ್ರವಾರದಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪಿ.ಸಿ.&ಪಿ.ಎನ್.ಡಿ.ಟಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೊದಲ ಮಗು ಹೆಣ್ಣಾದಲ್ಲಿ ಎರಡನೇ ಮಗು ಗಂಡಾಗಬೇಕೆAದು ಬಹಳಷ್ಟು ಪೋಷಕರು, ಕುಟುಂಬದವರು ಬಯಸುತ್ತಾರೆ. ಇದರ ಬಗ್ಗೆ ಮುಂಚಿತವಾಗಿ ತಿಳಿಯಲು ಗರ್ಭಿಣಿಯ ಸ್ಕಾö್ಯನಿಂಗ್ ಸಮಯದಲ್ಲಿ ರೇಡಿಯೋಲಾಜಿಸ್ಟ್ಗಳಿಗೆ ಮನವಿ ಮಾಡಬಹುದು. ಅಥವಾ ಕೆಲವು ಸ್ಕಾö್ಯನಿಂಗ್ ಸೆಂಟರ್‌ಗಳಲ್ಲಿ ಪ್ರಸವ ಪೂರ್ವ ಲಿಂಗಪತ್ತೆ ಕಾರ್ಯ ನಡೆಯುತ್ತಿರಬಹುದು. ಇದನ್ನು ಪತ್ತೆಹಚ್ಚಲು ಪಿ.ಸಿ.&ಪಿ.ಎನ್.ಡಿ.ಟಿ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸದಸ್ಯರು ತಂಡವಾಗಿ ಅಥವಾ ವೈಯಕ್ತಿಕವಾಗಿ ಯಾವುದೇ ಸ್ಕಾö್ಯನಿಂಗ್ ಸೆಂಟರ್‌ನಲ್ಲಿ ಗೌಪ್ಯ ಕಾರ್ಯಾಚರಣೆ ನಡೆಸಿ, ನೈಜತೆ ಪರೀಕ್ಷೆ ಮಾಡಬಹುದು. ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ಕಾನೂನು ಬಾಹಿರ ಹಾಗೂ ಗಂಭೀರ ಅಪರಾಧವಾಗಿದ್ದು, ಈ ಬಗ್ಗೆ ಎಲ್ಲ ಸ್ಕಾö್ಯನಿಂಗ್ ಸೆಂಟರ್‌ಗಳಲ್ಲಿ ಪೋಸ್ಟರ್‌ಗಳ ಮೂಲಕ ಜಾಗೃತಿ ಮೂಡಿಸಲಾಗಿದೆ. ಆದಾಗ್ಯೂ ಅಲ್ಲಲ್ಲಿ ಕಾಯ್ದೆ ವಿರುದ್ಧವಾದ ಆರೋಪಗಳು ಕೇಳಿ ಬರುತ್ತವೆ. ಇದಕ್ಕಾಗಿ ಕೇವಲ ಸಮಿತಿ ಸದಸ್ಯರು ಮಾತ್ರವಲ್ಲದೆ ಯಾವುದೇ ಸಾರ್ವಜನಿಕರು ಗೌಪ್ಯ ಕಾರ್ಯಾಚರಣೆ ಮೂಲಕ ಸಾಕ್ಷಿ ಸಮೇತ ಪ್ರಕರಣವನ್ನು ಪತ್ತೆ ಹಚ್ಚಿ, ದೂರು ಸಲ್ಲಿಸಬಹುದು ಅಥವಾ ಸಂಬAಧಿಸಿದ ಇಲಾಖೆಗೆ ಮಾಹಿತಿ ನೀಡಬಹುದು. ಇದುವರೆಗೂ ಜಿಲ್ಲೆಯಲ್ಲಿ ಇಂತಹ ಯಾವುದೇ ಪ್ರಕರಣ ವರದಿಯಾಗಿಲ್ಲವಾದರೂ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ, ಹೆಣ್ಣು ಭ್ರೂಣ ಹತ್ಯೆ ತಡೆದು ಲಿಂಗ ಸಮಾನತೆ ಸಾಧಿಸುವಲ್ಲಿ ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಅವರು ಹೇಳಿದರು.
ಯಾವುದೇ ಸ್ಕಾö್ಯನಿಂಗ್ ಸೆಂಟರ್‌ಗಳಲ್ಲಿ ಕಾನೂನು ಬಾಹಿರವಾಗಿ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಪ್ರಕರಣಗಳು ಕಂಡುಬAದಲ್ಲಿ ಸಾರ್ವಜನಿಕರು ಆರೋಗ್ಯ ಇಲಾಖೆ ಅಥವಾ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬಹುದು. ಮಾಹಿತಿ ಆಧರಿಸಿ ನಡೆಸಿದ ತನಿಖೆಯಲ್ಲಿ ಪ್ರಕರಣ ಸಾಬೀತಾದಲ್ಲಿ ಮಾಹಿತಿದಾರರ ಗೌಪ್ಯತೆಯನ್ನು ಕಾಪಾಡುವುದರ ಜೊತೆಗೆ ರೂ.1 ಲಕ್ಷಗಳ ಬಹುಮಾನವನ್ನು ಸಹ ನೀಡಲಾಗುವುದು. ಇದುವರೆಗೂ ರೂ.50,000 ರಷ್ಟಿದ್ದ ಬಹುಮಾನ ಮೊತ್ತವನ್ನು ಭ್ರೂಣ ಲಿಂಗ ಹತ್ಯೆಯನ್ನು ಪರಿಣಾಮಕಾರಿಯಾಗಿ ತಡೆಯುವ ಹಾಗೂ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಉದ್ದೇಶದಿಂದ ರೂ.1 ಲಕ್ಷಕ್ಕೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಆದ್ದರಿಂದ ಜಿಲ್ಲೆಯ ಯಾವುದೇ ಸಾರ್ವಜನಿಕರಿಗೆ, ಅಧಿಕಾರಿಗಳಿಗೆ ಭ್ರೂಣ ಲಿಂಗ ಪತ್ತೆ ಕುರಿತು ಗೊತ್ತಾದಲ್ಲಿ ಯಾವುದೇ ಸಮಯದಲ್ಲಿ ಸಂಬAಧಿಸಿದ ಇಲಾಖೆಗೆ ಮಾಹಿತಿ ನೀಡಬಹುದು ಎಂದು ಅವರು ತಿಳಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ ಎಂ.ಎಚ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ಕಾö್ಯನಿಂಗ್ ಸೆಂಟರ್‌ಗಳಲ್ಲಿ ಫಾರಂ-ಎಫ್ ಸೇರಿದಂತೆ ಎಲ್ಲ ಅಗತ್ಯ ದಾಖಲಾತಿಗಳ ನಿರ್ವಹಣೆ ಕಡ್ಡಾಯ. ಎಲ್ಲ ಸ್ಕಾö್ಯನಿಂಗ್ ಸೆಂಟರ್‌ಗಳು ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆಯಡಿ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಬೇಕು ಹಾಗೂ ನೋಂದಣಿ ಅವಧಿ ಪೂರ್ಣಗೊಳ್ಳುವುದಕ್ಕಿಂತ ಮೂರು ತಿಂಗಳ ಮುಂಚೆ ಅರ್ಜಿ ಸಲ್ಲಿಸಿ ನವೀಕರಣ ಮಾಡಿಕೊಳ್ಳಬೇಕು. ಸ್ಕಾö್ಯನಿಂಗ್ ಕುರಿತಾದ ಮಾರ್ಗಸೂಚಿಗಳನ್ನು ಪಾಲಿಸಿ ನಿಗದಿತ ನಮೂನೆಗಳನ್ನು ನಿರ್ವಹಿಸಬೇಕು. ನೋಂದಣಿ, ಪರವಾನಗಿ ನವೀಕರಣವಿಲ್ಲದ ಆರೋಗ್ಯ ಸಂಸ್ಥೆಗಳ ಮೇಲೆ ಹಾಗೂ ನಿಗದಿತ ನಿಯಮ ಪಾಲನೆ ಹಾಗೂ ದಾಖಲಾತಿಗಳನ್ನು ನಿರ್ವಹಿಸದ ಆರೋಗ್ಯ ಸಂಸ್ಥೆಗಳನ್ನು ಮುಚ್ಚಿಸಲು ಅಥವಾ ಸ್ಥಗಿತಗೊಳಿಸಲು ಕಾಯ್ದೆಯಡಿ ಅವಕಾಶವಿರುತ್ತದೆ. ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆಯನ್ನು ಜಿಲ್ಲೆಯಲ್ಲಿ ಸಮಪರ್ಕವಾಗಿ ಅನುಷ್ಠಾನ ಮಾಡಲಾಗುತ್ತಿದ್ದು, ಎಲ್ಲ ಸ್ಕಾö್ಯನಿಂಗ್ ಸೆಂಟರ್‌ಗಳು ಕಾಯ್ದೆ ಪಾಲನೆ ಜೊತೆಗೆ ನಿಯಮಾನುಸಾರ ನೋಂದಣಿ, ನವೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಅನುಸಾರ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧಿಸಲಾಗಿದೆ. ಸರ್ಕಾರಿ ಅಥವಾ ಖಾಸಗಿ ಯಾವುದೇ ವೈದ್ಯರು ಇಂತಹ ಕೃತ್ಯಗಳಲ್ಲಿ ಭಾಗಿಯಾದಲ್ಲಿ ಅವರಿಗೆ ಕಾರಾಗೃಹ ಶಿಕ್ಷೆ ಸಹಿತ ದಂಡವನ್ನು ವಿಧಿಸಲಾಗುವುದು. ಮೊದಲ ಅಪರಾಧಕ್ಕೆ 5 ವರ್ಷ ವೈದ್ಯಕೀಯ ಪರವಾನಿಗೆಯನ್ನು ರದ್ದುಪಡಿಸುವುದು. ನಂತರದ ಅಪರಾಧಕ್ಕೆ ಸಂಬAಧಿಸಿದ ವೈದ್ಯರ ವೈದ್ಯಕೀಯ ಪರವಾನಿಗೆಯನ್ನು ರಾಜ್ಯ ವೈದ್ಯಕೀಯ ಮಂಡಳಿಯಿAದ ಶಾಶ್ವತವಾಗಿ ತೆಗೆದು ಹಾಕಿ, ವೈದ್ಯಕೀಯ ವೃತ್ತಿ ನಡೆಸಲು ಆಜೀವ ನಿಷೇಧ ಹೇರಲಾಗುವುದು. ಒಂದು ವೇಳೆ ಸ್ವತಃ ಮಹಿಳೆ, ಆಕೆಯ ಪತಿ ಅಥವಾ ಸಂಬAಧಿಕರು ಭ್ರೂಣ ಲಿಂಗ ಪತ್ತೆಗೆ ಯತ್ನಿಸಿ, ವೈದ್ಯರಿಗೆ ಒತ್ತಡ ಹೇರಿದಲ್ಲಿ ಅವರಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ರೂ.50 ಸಾವಿರದಿಂದ 1 ಲಕ್ಷದವರೆಗೆ ದಂಡವನ್ನು ವಿಧಿಸಲು ಅವಕಾಶವಿದೆ. ಖಾಸಗಿ ಸ್ಕಾö್ಯನಿಂಗ್ ಸೆಂಟರ್‌ಗಳಿಗೆ ಬರುವ ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು ಅಥವಾ ಬಾಲ ಗರ್ಭಿಣಿಯರ ಬಗ್ಗೆ ಆರೋಗ್ಯ ಇಲಾಖೆಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಅಪ್ರಾಪ್ತ ವಯಸ್ಸಿನ ಗರ್ಭಿಣಿಯರ ಗರ್ಭಧಾರಣೆ ಹಾಗೂ ಗರ್ಭಪಾತ ಎರಡೂ ತಾಯಿ ಹಾಗೂ ಮಗುವಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಇಂತಹ ಪ್ರಕರಣಗಳನ್ನು ಖಾಸಗಿ ವೈದ್ಯಾಧಿಕಾರಿಗಳು, ಸ್ಕಾö್ಯನಿಂಗ್ ಸೆಂಟರ್‌ಗಳು ಕಡ್ಡಾಯವಾಗಿ ವರದಿ ಮಾಡಬೇಕು ಎಂದು ಸಭೆಗೆ ತಿಳಿಸಿದರು.
ಜಿಲ್ಲೆಯ ವಿವಿಧ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳ ನೋಂದಣಿ, ನವೀಕರಣ ಹಾಗೂ ಹೊಸ ಅರ್ಜಿಗಳಿಗೆ ಅನುಮತಿ ಕುರಿತಂತೆ ಚರ್ಚಿಸಲಾಯಿತು.
ಸಭೆಯಲ್ಲಿ ಸಮಿತಿಯ ಸದಸ್ಯರುಗಳಾದ ಸ್ತಿçà ರೋಗ ತಜ್ಞರಾದ ಡಾ.ಈಶ್ವರ ಸವಡಿ, ಮಕ್ಕಳ ತಜ್ಞರಾದ ಡಾ.ಶಶಿಕಾಂತ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ.ಶ್ರೀನಿವಾಸ ಹ್ಯಾಟಿ, ಜಿಲ್ಲಾ ಯೂನಿಸೆಫ್ ಸಂಯೋಜಕರಾದ ಹರೀಶ್ ಜೋಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Comments are closed.