ಜುಲೈ 02 ರಂದು ಕೊಪ್ಪಳದಲ್ಲಿ ಡಾ.ಫ.ಗು ಹಳಕಟ್ಟಿ ಜನ್ಮದಿನಾಚರಣೆ

Get real time updates directly on you device, subscribe now.

 ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಡಾ.ಫ.ಗು ಹಳಕಟ್ಟಿ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಜುಲೈ 02ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ  ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕೆ. ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ ತುಂಗಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರಾದ ಹಸನ್ ಸಾಬ್ ನಬೀಬ್ ಸಾಬ್ ದೋಟಿಹಾಳ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್ ಅವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ವಿಶ್ವಗುರು ಬಸವೇಶ್ವರ ಟ್ರಸ್ಟ್ನ  ಶರಣರಾದ ಶಿವಕುಮಾರ ಕುಕನೂರ ಅವರು ಡಾ.ಫ.ಗು ಹಳಕಟ್ಟಿ ಅವರ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ ಅವರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!