ಹಾಲಿನ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ

Get real time updates directly on you device, subscribe now.

ಕೊಪ್ಪಳ : ರಾಜ್ಯ ಸರ್ಕಾರವು ಹಾಲಿನ ಹಾಗೂ ಪೆಟ್ರೋಲ್ ದರ ಏರಿಕೆ ಖಂಡಿಸಿ ಕೊಪ್ಪಳ ಜಿಲ್ಲಾ ರೈತ ಮೋರ್ಚಾದ ವತಿಯಿಂದ ಡಾ.ಬಸವರಾಜ ಕ್ಯಾವಟರ್ ನೇತೃತ್ವದಲ್ಲಿ ರಸ್ತೆಯಲ್ಲಿ ಹಸುಗಳ ಹಾಲು ಕರೆಯುವ ಮೂಲಕ ವಿನೂತನ ಪ್ರತಿಭಟನೆ ಮಾಡುವ ಮೂಲಕ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
ಮನವಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಬಸವರಾಜ ಕ್ಯಾವಟರ್ ರಾಜ್ಯ ಸರ್ಕಾರದ ದಿನೇ ದಿನೇ ಅಗತ್ಯವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ರಾಜ್ಯದ ಜನ ತತ್ತರಿಸಿದ್ದಾರೆ ಕೂಡಲೆ ಸರಕಾರ ಅಗತ್ಯ ವಸ್ತುಗಳ ಬೆಲೆಯನ್ನು ನಿಯಂತ್ರಣ ಮಾಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಅಶೋಕ ಗುಳದಳ್ಳಿ ಮಾತನಾಡಿ ಹಾಲಿನ ಪ್ರೋತ್ಸಾಹ ಧನವೂ ಇಲ್ಲ ಬರ ಪರಿಹಾರದ ಹಣವೂ ಇಲ್ಲ ಬಿತ್ತನೆ ಬೀಜಗಳ ಬೆಲೆ ಏರಿಕೆಯಾಗಿದೆ ಭೂ ಸಿರಿ ಯೋಜನೆ, ರೈತ ವಿದ್ಯಾನಿಧಿ ಯೋಜನೆಯನ್ನು ರಾಜ್ಯ ಸರಕಾರ ನಿಲ್ಲಿಸಿದೆ, ಇತ್ತೀಚೆಗೆ ಪೆಟ್ರೋಲ್ ಡೀಸೆಲ್ ಬೆಲೆ, ಮುದ್ರಾಂಕದ ಬೆಲೆಯನ್ನು ಏರಿಕೆಮಾಡಲಾಗಿದೆ ಜನ ಸಾಮಾನ್ಯರ ಜೀವನ ನಿರ್ವಹಣೆ ಮಾಡಲು ಕಷ್ಟಪಡುತ್ತಿರುವ ಈ ಸಮಯದಲ್ಲಿ ಬೆಲೆ ಏರಿಕೆ ಮಾಡಿ ರೈತರ ಕೆಂಗಣ್ಣಿಗೆ ಸರಕಾರ ಗುರಿಯಾಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರತಿಭಟನೆಯ ಸಂದರ್ಭದಲ್ಲಿ  ಮಹೇಶ ಅಂಗಡಿ, ಗಣೇಶ ಹೊರತಟ್ನಾಳ, ವೀರಣ್ಣ ಹುಣಸಿಹಾಳ, ವಿರುಪಾಕ್ಷಪ್ಪ ಆಗೋಲಿ, ಲಕ್ಷ್ಮಣ ಮಾಳಗಿ, ಸಂಗಮೇಶ ಹಿರೇಮಠ ಸೇರಿದಂತೆ ಹಲವು ಬಿಜೆಪಿ ರೈತ ಮೋರ್ಚಾ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: