ನಿರಂತರ ಅಧ್ಯಯನ ದಿಂದ ಮಾತ್ರ ಯಶಸ್ಸು ಸಾಧ್ಯ – ಡಾ. ಗವಿಸಿದ್ದಪ್ಪ ಮುತ್ತಾಳ
ಅಳವಂಡಿ: ನಿರಂತರ ಪ್ರಯತ್ನ ಹಾಗೂ ಕಠಿಣ ಅಧ್ಯಯನದಿಂದ ಮಾತ್ರ ಯಶಸ್ಸು ಸಾದ್ಯವಾಗುತ್ತದೆ. ಅಂತಹ ಅಧ್ಯಯನಕ್ಕೆ ಹೆಚ್ಚು ಒತ್ತು ಕೊಟ್ಟು ಹೆಚ್ಚಿನ ಜ್ಞಾನಾರ್ಜನೆಯನ್ನು ಪಡೆದುಕೊಳ್ಳಬೇಕು ಎಂದು ಪ್ರಾಂಶುಪಾಲರಾದ ಡಾ. ಗವಿಸಿದ್ದಪ್ಪ ಮುತ್ತಾಳ ಹೇಳಿದರು.
ಗ್ರಾಮದ ಶ್ರೀ ಶಿವಮೂರ್ತಿ ಸ್ವಾಮಿ ಇನಾಮದಾರ ಕಟ್ಟಿಮನಿ ಹಿರೇಮಠ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಹಾಗೂ ಭೂಮಿ ಸ್ಟಡಿ ಸರ್ಕಲ್ ಕೊಪ್ಪಳ ಇವರ ಸಹಯೋಗದಲ್ಲಿ ಏರ್ಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಸ್ಪರ್ಧಾತ್ಮಕ ಯುಗದಲ್ಲಿ ಸಮಗ್ರ ಅಧ್ಯಯನ ಮುಖ್ಯ ಸಮಗ್ರ ಅಧ್ಯಯನದಿಂದ ಸಾಧನೆಯನ್ನು ಮಾಡಿ ಯಶಸ್ಸು ಪಡೆಯಬೇಕು. ಅಲ್ಲದೇ ಜೀವನದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರಯತ್ನ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಭೂಮಿ ಸ್ಟಡಿ ಸರ್ಕಲ್ ನ ನಿರ್ದೇಶಕರಾದ ಮಹೇಶ್ ಪಟ್ಟೇದ್ ರವರು ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚಿನ ಅಧ್ಯಯನ ಮುಖ್ಯ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೇಳುವ ಪ್ರಚಲಿತ ವಿದ್ಯಮಾನಕ್ಕೆ ಸಂಬಂಧಿಸಿದಂತೆ ದಿನ ಪತ್ರಿಕೆಯನ್ನು ನಿತ್ಯ ಓದುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದರು. ಅಲ್ಲದೆ ಪ್ರಚಲಿತ ವಿದ್ಯಮಾನಕ್ಕೆ ಸಂಬಂದಿಸಿದ ಮಾದರಿ ಪ್ರಶ್ನೆಗಳನ್ನು ಬಿಡಿಸುವುದರ ಮೂಲಕ ಮಾಹಿತಿ ನೀಡಿದರು.
ಈ ವೇಳೆ ಇಂಗ್ಲಿಷ್ ವಿಭಾಗ ಮುಖ್ಯಸ್ಥರಾದ ಮಲ್ಲಿಕಾರ್ಜುನ್, ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಇಮಾಮ್ ಸಾಬ್, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಜಗದೀಶ್, ಉಪನ್ಯಾಸಕರಾದ ವೆಂಕಟೇಶ್, ವಿಜಯ್ ಕುಮಾರ್ ಕುಲಕರ್ಣಿ, ಕೃಷ್ಣ, ವಿನಾಯಕ್ ನಾಯ್ಕ್, ಸಿದ್ದಪ್ಪ, ಇಬ್ರಾಹಿಂ ನದಾಫ್, ರಾಘವೇಂದ್ರ, ದೇವರಾಜ್, ಮಹೇಶ್, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
Comments are closed.