ಶ್ರೀಗವಿಸಿದ್ದೇಶ್ವರ ಅರ್ಬನ್ ಬ್ಯಾಂಕ್ ವತಿಯಿಂದ : ಉಚಿತ ವಸತಿ ಹಾಗೂ ಪ್ರಸಾದ ನಿಲಯಕ್ಕೆ 1.25 ಲಕ್ಷ ರೂ.ದೇಣಿಗೆ

Get real time updates directly on you device, subscribe now.

ಕೊಪ್ಪಳ : ನಗರದ ಪ್ರತಿಷ್ಠಿತ ಶ್ರೀಗವಿಸಿದ್ದೇಶ್ವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದ ವತಿಯಿಂದ 5 ಸಾವಿರ ವಿದ್ಯಾರ್ಥಿಗಳಿಗಾಗಿ ನಿರ್ಮಾಣಗೊಂಡ ಶ್ರೀಗವಿಸಿದ್ದೇಶ್ವರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯಕ್ಕೆ 1.25 ಲಕ್ಷ ರೂ.ಗಳ ದೇಣಿಗೆಯನ್ನು ಗವಿಮಠದ ಶ್ರೀಗವಿಸಿದ್ದೇಶ್ವರ ಮಹಾಸ್ವಾಮಿಗಳಿಗೆ ನೀಡಿ ಆಶೀರ್ವಾದ ಪಡೆದರು.
   ಈ ಸಂದರ್ಭದಲ್ಲಿ ಶ್ರೀಗವಿಸಿದ್ದೇಶ್ವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ರಾಜಶೇಖರಗೌಡ ಎಂ.ಆಡೂರ, ಉಪಾಧ್ಯಕ್ಷ ಬಸಯ್ಯ ಹಿರೇಮಠ, ನಿರ್ದೇಶಕರಾದ ವಿಶ್ವನಾಥ ಅಗಡಿ, ಬಸವರಾಜ್ ಶಹಪೂರು, ರಾಜೇಂದ್ರಕುಮಾರ ಶೆಟ್ಟರ್, ಶಿವಕುಮಾರ ಪಾವಲಿಶೆಟ್ಟರ್, ಶಿವರಡ್ಡಿ ಭೂಮಕ್ಕನವರ್, ಗವಿಸಿದ್ದಪ್ಪ ತಳಕಲ್, ರಮೇಶ ಕವಲೂರು, ನಾಗರಾಜ್ ಅರಕೇರಿ, ಸುಮಂಗಲಾ ಸೋಮಲಾಪೂರ, ಸೈಯದಾ ಶೈನಾಜಬೇಗಂ, ಜಯಶ್ರೀ ಬಬಲಿ ಪ್ರಧಾನ ವ್ಯವಸ್ಥಾಪಕ ಪ್ರಭಾಕರ ಜೋಷಿ, ವ್ಯವಸ್ಥಾಪಕ ಮಲ್ಲಿಕಾರ್ಜುನ ಸಿದ್ನೆಕೊಪ್ಪ ಸೇರಿದಂತೆ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!