ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪಂಚಾಯತ್ ಸಿಇಓ
: ಐಎಎಸ್ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರು ವಿಜಯನಗರ ಜಿಲ್ಲೆಯ ಜಿಲ್ಲಾ ಪಂಚಾಯತನ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಜುಲೈ 05ರಂದು ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ ಅವರು ನೂತನ ಜಿಪಂ ಸಿಇಓ ಅವರಿಗೆ ಸ್ವಾಗತಿಸಿ, ಆತ್ಮೀಯವಾಗಿ ಬರಮಾಡಿಕೊಂಡು ಅಧಿಕಾರ ಹಸ್ತಾಂತರಿಸಿದರು.
2020ರ ಬ್ಯಾಚ್ ನ ಕರ್ನಾಟಕ ಕೇಡರನ ಐಎಎಸ್ ಅಧಿಕಾರಿಯಾಗಿರುವ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರು ಮೂಲತಃ ಮಣಿಪುರ ರಾಜ್ಯದ ಇಂಪಾಲ್ ದವರಾಗಿದ್ದಾರೆ. ಕಂಪ್ಯೂಟರ್ ಸಾಯನ್ಸ್ ಎಂಜಿನಿಯರಿಂಗ್ ಅಧ್ಯಯನ ಮಾಡಿದ್ದಾರೆ. ಇವರು ಈ ಮೊದಲು ವಿಜಯನಗರ ಜಿಲ್ಲೆಯಲ್ಲಿ ಕಳೆದ 12 ತಿಂಗಳಿನಿಂದ ಹೊಸಪೇಟೆ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
Comments are closed.