ಜುಲೈ 08 ರಿಂದ ಕೊಪ್ಪಳದಲ್ಲಿ ವೃತ್ತಿ ಬುನಾದಿ ತರಬೇತಿ

Get real time updates directly on you device, subscribe now.

): ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯಿಂದ ವೃತ್ತಿ ಬುನಾದಿ ತರಬೇತಿ ಕಾರ್ಯಕ್ರಮವನ್ನು ಜುಲೈ 08 ರಿಂದ ಆಗಸ್ಟ್‌ 31ರ ವರೆಗೆ ನಗರದ ತಹಶೀಲ್ದಾರರ ಕಚೇರಿಯಲ್ಲಿ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರಮ ಜುಲೈ 08ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಕೊಪ್ಪಳ ತಹಶೀಲ್ದಾರರಾದ ವಿಠಲ್ ಚೌಗಲಾ, ಗ್ರೇಡ್-2 ತಹಶೀಲ್ದಾರರಾದ ಗವಿಸಿದ್ದಪ್ಪ ಮಣ್ಣೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮಣ್ಣವರ್ ಅವರು ಪಾಲ್ಗೊಳ್ಳುವರು.
ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣಮೂರ್ತಿ ದೇಸಾಯಿ, ಮೈಲಾರ್ ರಾವ್ ಕುಲಕರ್ಣಿ ಮತ್ತು ಲಾಯಕ್ ಅಲಿ ಅವರು ಪಾಲ್ಗೊಳ್ಳುವರು ಎಂದು ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!