ಕೊಪ್ಪಳ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಆರೋಗ್ಯ ಸೇವೆ : ಆರೋಗ್ಯ ಕೇಂದ್ರಕ್ಕೆ ನ್ಯಾ. ಎಂ.ಜಿ.ಶುಕುರೆ ಕಮಾಲ ಅವರಿಂದ ಚಾಲನೆ
ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಾರಂಭಿಸಲಾದ ಆರೋಗ್ಯ ಕೇಂದ್ರಕ್ಕೆ ಗೌರವಾನ್ವಿತ ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರು ಆಗಿರುವ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ ಶುಕುರೆ ಕಮಾಲ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಜುಲೈ 06ರಂದು ಚಾಲನೆ ನೀಡಿದರು.
, ಈ ದಿಶೆಯಲ್ಲಿ ನ್ಯಾಯಾಧೀಶರು, ವಕೀಲರು, ಕಕ್ಷಿದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಾರಂಭಿಸಲಾದ ಆರೋಗ್ಯ ಕೇಂದ್ರದ ಉದ್ಘಾಟನೆ ಕಾರ್ಯಕ್ರಮವು ಕೊಪ್ಪಳ ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಕೀಲರ ಸಂಘ ಇವರ ಸಹಯೋಗದಲ್ಲಿ ನಡೆಯಿತು.ಇದೇ ವೇಳೆ ನ್ಯಾಯಮೂರ್ತಿಗಳು, ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸಸಿ ನೆಟ್ಟು ಅದಕ್ಕೆ ನೀರುಣಿಸಿದರು. ಬಳಿಕ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕೇಂದ್ರಿಯ ಅಭಿಲೇಖಾಲಯಕ್ಕೆ ಭೇಟಿ ನೀಡಿ, ಅಭಿಲೇಖಾಲಯದಲ್ಲಿನ ಕಡತ ಹಾಗೂ ದಾಖಲೆಗಳ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ.ಚಂದ್ರಶೇಖರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಟಿ.ಲಿಂಗರಾಜು, ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ.ಕಣವಿ, ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯರಾದ ಎಸ್.ಆಸೀಫ್ ಅಲಿ, ರಾಜ್ಯ ವಕೀಲರ ಪರಿಷತ್ ಮಾಜಿ ಸದಸ್ಯರು ಹಾಗೂ ಕರ್ನಾಟಕ ಮಹಿಳಾ ವಕೀಲರ ಒಕ್ಕೂಟದ ಅಧ್ಯಕ್ಷರಾದ ಸಂಧ್ಯಾ ಬಿ ಮಾದಿನೂರು, ಗೌರವಾನ್ವಿತ ಪ್ರಧಾನ ಜಿಲ್ಲಾ ಕೌಟುಂಬಿಕ ನ್ಯಾಯಾಧೀಶರಾದ ಸರಸ್ವತಿದೇವಿ, ಹೆಚ್ಚುವರಿ ಜಿಲ್ಲಾ ತ್ವರಿತ (ಪೊಕ್ಸೋ) ನ್ಯಾಯಾಧೀಶರಾದ ಕುಮಾರ ಡಿ.ಕೆ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಆರ್.ಒಡೆಯರ್, ಹಿರಿಯ ಸಿವಿಲ್ ಮತ್ತು ಸಿ.ಜೆ.ಎಂ ನ್ಯಾಯಾಧೀಶರಾದ ಮಹಾಂತೇಶ ಸಂಗಪ್ಪ ದರಗದ, ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಭಾಗ್ಯಲಕ್ಷ್ಮೀ, ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಆದಿತ್ಯಕುಮಾರ್ ಹೆಚ್.ಆರ್., ಸೇರಿದಂತೆ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Comments are closed.