ಕಲಾಲಬಂಡಿ ಗ್ರಾಮದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ
: ಕುಷ್ಟಗಿ ತಾಲ್ಲೂಕಿನ ಚಳಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕಲಾಲಬಂಡಿ ಗ್ರಾಮದಲ್ಲಿ ಜುಲೈ 08 ರಂದು ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆ ಮಾಡಲಾಯಿತು. ಬಳಿಕ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಶರಣಪ್ಪ ಮಾತನಾಡಿ, ಸೊಳ್ಳೆಗಳಿಂದ ಹರಡುವ ಕಾಯಿಲೆಗಳು ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ, ಆನೆಕಾಲು ರೋಗ, ಮೆದುಳು ಜ್ವರ ಕಾಯಿಲೆಗಳು ಹಾಗೂ ಲಕ್ಷಣಗಳು, ಸೊಳ್ಳೆಗಳ ಜೀವನ ಚಕ್ರ ಸೊಳ್ಳೆಗಳ ನಿಯಂತ್ರಣ ಕ್ರಮ ಹಾಗೂ ಸ್ವಯಂ ರಕ್ಷಣಾ ವಿಧಾನಗಳ ಕುರಿತು ಮತ್ತು ಕುಟುಂಬ ಕಲ್ಯಾಣ ವಿಧಾನಗಳ ಅಳವಡಿಕೆ ಜನಸಂಖ್ಯೆ ಹೆಚ್ಚಳದಿಂದ ಆಗುವ ಪರಿಣಾಮ ಮತ್ತು ಜನಸಂಖ್ಯೆ ನಿಯಂತ್ರಣ ಕ್ರಮಗಳು, ಬಾಲ್ಯ ವಿವಾಹದಿಂದ ಆಗುವ ತೊಂದರೆಗಳು ಮತ್ತು ಹೆಣ್ಣು ಭ್ರೂಣ ಹತ್ಯೆ ಹಾಗೂ ಕ್ಷಯರೋಗದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರಾದ ನಿಂಗನಗೌಡ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶರಣವ್ವ ಮಾದರ, ಕಲಾಲಬಂಡಿ ಗ್ರಾಮ ಪಂಚಾಯತ್ ಸದಸ್ಯರಾದ ಶರಣಪ್ಪ ರಾಜೂರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸಮುದಾಯ ಆರೋಗ್ಯ ಅಧಿಕಾರಿಗಳಾದ ಪ್ರಶಾಂತ್ , ಸನ್ಮತಿ , ರವಿಕುಮಾರ್ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸರಸ್ವತಿ ನಾಯಕ್, ಪ್ರಭಾರಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಂಗಮೇಶ್ ಅಂಗಡಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Comments are closed.