ಜಿಲ್ಲಾ ಕಸಾಪ ಕ್ರಿಯಾಶೀಲಗೊಳ್ಳಲಿ : ಡಾ. ಹನುಮಂತಪ್ಪ ಅಂಡಗಿ
ಕೊಪ್ಪಳ: ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕ್ರಿಯಾಶೀಲವಾಗಿಲ್ಲ. ಇದು ಬಹುತೇಕ ಕೊಪ್ಪಳ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಅಭಿಪ್ರಾಯಯೂ ಆಗಿದೆ. ಅನೇಕ ದತ್ತಿ ಉಪನ್ಯಾಸಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಬಹುತೇಕ ಜಿಲ್ಲೆಯ ಎಲ್ಲಾ ತಾಲೂಕು ತಾಲೂಕ ಸಮ್ಮೇಳನ ಹಮ್ಮಿಕೊಂಡಿಲ್ಲ.ಇದರಿಂದ ಕನ್ನಡ ಸಾಹಿತ್ಯ ಪರಿಷತ್ತು ನಿಷ್ಕ್ರಿಯವಾಗಿದೆ ಎಂಬುದು ಗೊತ್ತಾಗುತ್ತದೆ. ಆದ್ದರಿಂದ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ್ನು ಕ್ರಿಯಾಶೀಲಗೊಳಿಸಬೇಕೆಂದು ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶರಣೇಗೌಡ ಪೊಲೀಸ ಪಾಟೀಲ ಅವರಲ್ಲಿ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಹನುಮಂತಪ್ಪ ಅಂಡಗಿ ಮನವಿ ಮಾಡಿಕೊಂಡಿದ್ದಾರೆ.
Comments are closed.