ಆಯೋಗದಿಂದ ಸಿಟ್ಟಿಂಗ್ಸ್: ಮಾಹಿತಿಯೊಂದಿಗೆ ಹಾಜರಾಗಲು ಅಧಿಕಾರಿಗಳಿಗೆ ಸೂಚನೆ

Get real time updates directly on you device, subscribe now.

: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಜುಲೈ 10 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ಹಾಗೂ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದು, ಸಂಬAಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ.

ಆಯೋಗವು ಜುಲೈ 10 ರಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಬೆಳಿಗ್ಗೆ  11.30 ಗಂಟೆಯಿAದ ಮಧ್ಯಾಹ್ನ 01.30 ಗಂಟೆಯವರೆಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 02 ಗಂಟೆಯಿAದ ಸಂಜೆ 07 ಗಂಟೆಯವರೆಗೆ ಸಾರ್ವಜನಿಕರಿಂದ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಿ ಪರಿಶೀಲಿಸಿ, ಇತ್ಯರ್ಥ ಪಡಿಸುವರು ಮತ್ತು ಸ್ಥಳೀಯ ಪರಿವೀಕ್ಷಣೆ ಕೈಗೊಳ್ಳಲಿದೆ.
ಆದ್ದರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಗೆ ಬರುವಾಗ ತಮಗೆ ಸಂಬAಧಿಸಿದ ಇಲಾಖೆಯಲ್ಲಿ ಸಾರ್ವಜನಿಕರಿಗೆ ಒದಗಿಸಲಾಗಿರುವ ಸರ್ಕಾರದ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿಗಳು, ಬಡವರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಿರುವ ಬಗ್ಗೆ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸೌಲಭ್ಯಗಳು, ದೇವದಾಸಿ ಪದ್ಧತಿಯಲ್ಲಿ ನೊಂದವರಿಗೆ ಪುನರ್ವಸತಿ ಕ್ರಮಗಳ ಬಗ್ಗೆ, ಲೈಂಗಿಕ ಶೋಷಣೆಗೆ ಒಳಗಾದವರು/ ಲೈಂಗಿಕ ಕಾರ್ಯಕರ್ತರು ಇವರುಗಳಿಗೆ ಸಂಬAಧಿಸಿದ ಪುನರ್ವಸತಿ ವಿಷಯಗಳು ಹಾಗೂ ಅಲ್ಪಸಂಖ್ಯಾತರು ಇವರುಗಳಿಗೆ ಒದಗಿಸಲಾಗಿರುವ ಸೌಲಭ್ಯಗಳ ಬಗ್ಗೆ ಮತ್ತು ಪಾದಚಾರಿ ಮಾರ್ಗಗಳನ್ನು ಅತಿಕ್ರಮಣ ಮಾಡಿಕೊಂಡಿರುವ ಬಗ್ಗೆ ಹಾಗೂ ಸದರಿ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಹೊರಡಿಸಲಾಗಿರುವ ಸಂಬAಧಿಸಿದ ಕಾಯ್ದೆಗಳು/ನೀತಿ ನಿಯಮಗಳು ಹಾಗೂ ಇತರೆ ಮಾರ್ಗಸೂಚಿಗಳ ಪ್ರತಿಗಳನ್ನು ಹಾಗೂ ಸದರಿ ಸೌಲಭ್ಯಗಳನ್ನು ವಿಸ್ತರಿಸಿರುವ ಬಗ್ಗೆ ಅಂಕಿ ಅಂಶಗಳ ಮಾಹಿತಿಗಳೊಂದಿಗೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ವಿವರಗಳು ಹಾಗೂ ಅವುಗಳಿಗೆ ಮಂಜೂರಾಗಿರುವ ಅನುದಾನ ಹಾಗೂ ಫಲಾನುಭವಿಗಳ ಅಂಕಿ ಅಂಶಗಳೊAದಿಗೆ ವಿವರಗಳೊಂದಿಗೆ ಮತ್ತು ತಮ್ಮಲ್ಲಿ ಬಾಕಿ ಇರುವ ಹೆಚ್.ಆರ್.ಸಿ ಪ್ರಕರಣಗಳ ಕುರಿತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿಯೊಂದಿಗೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: