ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಮಾಸಾಶನ: ಅರ್ಜಿ ಆಹ್ವಾನ

Get real time updates directly on you device, subscribe now.

 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಮಾಸಾಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಾಡು-ನುಡಿಯ ಸೇವೆಗೆ ಕಲೆ, ಸಂಸ್ಕೃತಿ, ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಇಲಾಖೆಯಿಂದ ನೀಡಲಾಗುವ ಮಾಸಾಶನದ ಸೌಲಭ್ಯ ದೊರಕಿಸಲು ಜಿಲ್ಲಾ ಹಂತದಲ್ಲಿ ಅರ್ಹರನ್ನು ಗುರುತಿಸಿ ಮಾಸಾಶನವನ್ನು ನಿಯಮಾನುಸಾರ ನೀಡಲು ಕ್ರಮವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಸೂಚಿಸಿರುತ್ತಾರೆ. ಅದರಂತೆ ಕೊಪ್ಪಳ ಜಿಲ್ಲೆಯಲ್ಲಿರುವ 58 ವರ್ಷ ಮೇಲ್ಪಟ್ಟ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಹಾಗೂ 40ವರ್ಷ ಮೇಲ್ಪಟ್ಟ ವಿಶೇಷ ಚೇತನ ಕಲಾವಿದರು ಸಹ ಜನ್ಮದಿನಾಂಕ ದಾಖಲೆಗಳೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಪ್ಪಳ ಕಚೇರಿಯಲ್ಲಿ ಅರ್ಜಿ ಪಡೆದು  ಮಾಸಾಶನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಪಡೆದ ಕಲಾವಿದರು ನಿಯಮಾನುಸಾರ ದಾಖಲೆಗಳನ್ನು ಸಲ್ಲಿಸಿದಲ್ಲಿ ಮಾಸಾಶನಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಹಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!