ಜುಲೈ 12ರಂದು ಗಂಗಾವತಿಯಲ್ಲಿ ವಾಕ್ ಇನ್ ಇಂಟರ್‌ವ್ಯೂವ್
: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಜುಲೈ 12ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಗಂಗಾವತಿ ಬಸ್ ನಿಲ್ದಾಣದ ಹತ್ತಿರವಿರುವ ಶ್ರೀ ನಿವಾಸ ಕಾಂಪ್ಲೆಕ್ಸ್ (ಕಲ್ಪವೃಕ್ಷ ಲೈಬ್ರರಿ ಎಸ್. ಎಲ್.ವಿ. ಅಯ್ಯಂಗಾರ್ ಬೇಕರಿ ಮೇಲೆ ಎರಡನೇ ಮಹಡಿ)ನಲ್ಲಿ ಆಯೋಜಿಸಲಾಗಿದೆ.
ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಖಾಸಗಿ ಸಂಸ್ಥೆಯವರು ಭಾಗವಹಿಸಿ, ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಾದ ಭೋದಕ ಮತ್ತು ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದು, ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ.ಡಿ, ಯಾವುದೇ ಪದವಿ ಅಭ್ಯರ್ಥಿಗಳು ಹಾಗೂ ಭಾರತೀಯ ಸಂವಿಧಾನ, ಇತಿಹಾಸ, ಭೂಗೋಳ ಶಾಸ್ತ್ರ, ಅರ್ಥಶಾಸ್ತ್ರ, ಗಣಿತ ಮತ್ತು ಮಾನಸಿಕ ಸಾಮರ್ಥ್ಯ, ವಿಜ್ಞಾನ ಮತ್ತು ತಂತ್ರಜ್ಞಾನ, ಕನ್ನಡ ಮತ್ತು ಇಂಗ್ಲೀಷ್, ಶಿಶು ವಿಕಸನ ಮತ್ತು ಬೋಧನಾ ಶಾಸ್ತ್ರ, ಈ ವಿಷಯಗಳಲ್ಲಿ ಪರಿಣಿತಿ ಹೊಂದಿದಂತ ಅಭ್ಯರ್ಥಿಗಳು ಭಾಗವಹಿಸಬಹುದು. 18 ರಿಂದ 45 ವರ್ಷದ ವರೆಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋಟೊ ಅಳತೆಯ ಭಾವಚಿತ್ರಗಳೊಂದಿಗೆ ಈ ವಾಕ್‌ಇನ್‌ಇಂಟರ್‌ವ್ಯೂವನಲ್ಲಿ ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು (08539-220859) ಸಂಪರ್ಕಿಸಬಹುದಾಗಿ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.