ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Get real time updates directly on you device, subscribe now.

  2024-25 ನೇ ಸಾಲಿಗಾಗಿ ಕೊಪ್ಪಳ ಮತ್ತು ಕುಷ್ಟಗಿ ತಾಲ್ಲೂಕಿನಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ  ವಸತಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ(ಎಸ್‌ಎಚ್‌ಪಿ ಪೋರ್ಟಲ್) ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕೊಪ್ಪಳದ ವಿಜಯನಗರ ಬಡಾವಣೆ, ಬಿಲಾಲ ನಗರ, ಆರೋಗ್ಯ ಬಡಾವಣೆ ಹಾಗೂ ಕುಷ್ಟಗಿಯ ಶಾಖಾಪುರ ರಸ್ತೆಯ  ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಕೊಪ್ಪಳ-1 ಮತ್ತು ಕೊಪ್ಪಳ-2 ಗಣೇಶ ತೆಗ್ಗಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯಗಳಿಗೆ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆಗಸ್ಟ್ 05 ಕೊನೆಯ ದಿನವಾಗಿದ್ದು, ಪೋಷಕರು/ವಿದ್ಯಾರ್ಥಿಗಳು ವೆಬ್‌ಸೈಟ್ ವಿಳಾಸ   https://shp.karnataka.gov.in/     ಮೂಲಕ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಿ ಅರ್ಜಿ ಪ್ರತಿ ಹಾಗೂ ಎಲ್ಲಾ ದಾಖಲೆಗಳನ್ನು ಸಂಬAಧಿಸಿದ ವಸತಿ ನಿಲಯಗಳಿಗೆ ನೀಡಬೇಕು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಸರ್ಕಾರಿ ಅಥವಾ ಅಂಗೀಕೃತ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರಬೇಕು. ವಸತಿ ನಿಲಯಗಳಲ್ಲಿ ಶೇ.75 ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ.25 ಇತರೆ ವರ್ಗದವರಿಗೆ ಮೀಸಲಿಡಲಾಗಿದೆ.  ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬ, ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ಕುಟುಂಬ ಹಾಗೂ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 2.50 ಲಕ್ಷ ರೂ.ಗಳಿಗಿಂತ ಮೀರಿರಬಾರದು. ಪ್ರವರ್ಗ-1 ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 1.00 ಲಕ್ಷ ರೂ.ಗಳಿಗಿಂತ ಮೀರಿರಬಾರದು. ಅರ್ಜಿಯೊಂದಿಗೆ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಕಾಲೇಝಿನ ಪ್ರವೇಶ ಶುಲ್ಕದ ರಸೀತಿ ಪ್ರತಿ, ಅಂಕಪಟ್ಟಿ ಹಾಗೂ ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಮತ್ತು ನಿಗದಿ ಪಡಿಸಿದ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನ ಅಜಾದ್ ಭವನ ಕೊಪ್ಪಳ, ಜಿಲ್ಲಾ  ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕುಷ್ಟಗಿ ಹಾಗೂ ಹತ್ತಿರದ ವಸತಿ ನಿಲಯಗಳಿಗೆ ಭೇಟಿ ನೀಡಬಹುದು ಎಂದು ಕೊಪ್ಪಳ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ರವಿ ಪೂಜಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!